ರಯಿಸೀ ಅಂತ್ಯಕ್ರಿಯೆ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಧನ್ಕರ್
Update: 2024-05-21 19:30 IST
ಜಗದೀಪ್ ಧನ್ಕರ್ | PC : PTI
ಹೊಸದಿಲ್ಲಿ : ಹೆಲಿಕಾಪ್ಟರ್ ಅವಘಡದಲ್ಲಿ ಮಡಿದ ಇರಾನ್ ಅಧ್ಯಕ್ಷ ಇಬ್ರಾಹೀಂ ರಯಿಸೀ ಅವರ ಅಂತ್ಯಕ್ರಿಯೆ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಪಾಲ್ಗೊಳ್ಳಲಿದ್ದು, ಭಾರತವನ್ನು ಪ್ರತಿನಿಧಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ಮಂಗಳವಾರ ತಿಳಿಸಿವೆ. ಧನ್ಕರ್ ಅವರು ಬುಧವಾರ ಇರಾನ್ ಗೆ ನಿರ್ಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ.