×
Ad

ಪಾಕಿಸ್ತಾನಕ್ಕೆ ಪ್ರಯಾಣಿಸದಿರಿ, ಅಲ್ಲಿದ್ದರೆ ಶೀಘ್ರ ಹಿಂದಿರುಗಿ: ಭಾರತೀಯ ಪ್ರಜೆಗಳಿಗೆ ಕೇಂದ್ರ ಸಲಹೆ

Update: 2025-04-24 21:52 IST

ಹೊಸದಿಲ್ಲಿ: ಪಾಕಿಸ್ತಾನಕ್ಕೆ ಪ್ರಯಾಣಿಸದಂತೆ ಹಾಗೂ ಪಾಕಿಸ್ತಾನದಲ್ಲಿರುವವರು ಆದಷ್ಟು ಬೇಗ ಭಾರತಕ್ಕೆ ಹಿಂದಿರುಗುವಂತೆ ಆಗ್ರಹಿಸಿ ಕೇಂದ್ರ ಸರಕಾರ ಗುರುವಾರ ಸಲಹೆ ಬಿಡುಗಡೆ ಮಾಡಿದೆ.

‘‘ಭಾರತೀಯ ಪ್ರಜೆಗಳು ಪಾಕಿಸ್ತಾನಕ್ಕೆ ಪ್ರಯಾಣಿಸದಂತೆ ಸಲಹೆ ನೀಡಲಾಗಿದೆ. ಅಲ್ಲದೆ, ಪ್ರಸಕ್ತ ಪಾಕಿಸ್ತಾನದಲ್ಲಿರುವ ಭಾರತೀಯ ಪ್ರಜೆಗಳು ಆದಷ್ಟು ಬೇಗ ಹಿಂದಿರುಗುವಂತೆ ಕೂಡ ಸಲಹೆ ನೀಡಲಾಗಿದೆ’’ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ)ದ ಹೇಳಿಕೆ ತಿಳಿಸಿದೆ.

ಜಮ್ಮು ಹಾಗೂ ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭೀಕರ ಭಯೋತ್ಪಾದಕ ದಾಳಿ ನಡೆದು 26 ಮಂದಿ ಸಾವನ್ನಪ್ಪಿದ ಘಟನೆಯ ಎರಡು ದಿನಗಳ ಬಳಿಕ ಕೇಂದ್ರ ಸರಕಾರ ಈ ಸಲಹೆ ಬಿಡುಗಡೆ ಮಾಡಿದೆ.  

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News