×
Ad

ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣ: ಸಿಬಿಐ ತನಿಖೆಗೆ ಆದೇಶಿಸಿದ ಕಲ್ಕತ್ತಾ ಹೈಕೋರ್ಟ್

Update: 2024-08-13 16:14 IST

ಕಲ್ಕತ್ತಾ ಹೈಕೋರ್ಟ್

ಕೋಲ್ಕತ್ತಾ: ಆರ್‌ಜಿ ಕರ್‌ ವೈದ್ಯಕೀಯ ಕಾಲೇಜಿನಲ್ಲಿ ತರಬೇತಿ ನಿರತ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ನಡೆದಿದ್ದ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಕಲ್ಕತ್ತಾ ಹೈಕೋರ್ಟ್ ಸಿಬಿಐ ತನಿಖೆಗೆ ವಹಿಸಿದೆ.

ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಹಲವಾರು ಅರ್ಜಿದಾರರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಟಿ.ಎಸ್.ಶಿವಗ್ನಾನಂ ಹಾಗೂ ನ್ಯಾ. ಹಿರನ್ಮಯ್ ಭಟ್ಟಾಚಾರ್ಯರನ್ನೊಳಗೊಂಡಿದ್ದ ನ್ಯಾಯಪೀಠವು, ರಾಜ್ಯ ಸರಕಾರದ ವಾದವನ್ನೂ ಆಲಿಸಿತಲ್ಲದೆ, ಕೇಸ್ ಡೈರಿಯನ್ನು ಅವಲೋಕಿಸಿತು.

“ಈಗ ನಮ್ಮೆದುರಿಗಿರುವ ಪ್ರಕರಣವು ಸಂಕೀರ್ಣವಾಗಿರುವಂತೆ ತೋರುತ್ತಿದೆ. ವಾಸ್ತವಾಂಶಗಳು ಹಾಗೂ ಸನ್ನಿವೇಶಗಳು ಮತ್ತಷ್ಟು ಸಮಯ ವ್ಯರ್ಥವಾಗದಂತೆ ಸೂಕ್ತ ಕ್ರಮಕ್ಕೆ ಆಗ್ರಹಿಸುತ್ತಿವೆ. ಘಟನೆ ನಡೆದು ಐದು ದಿನಗಳು ಕಳೆದರೂ, ಈ ಪ್ರಕರಣದ ತನಿಖೆಯಲ್ಲಿ ಯಾವುದೇ ಮಹತ್ವದ ಪ್ರಗತಿಯಾಗಿಲ್ಲ ಎಂಬುದು ನಮಗೆ ಮನದಟ್ಟಾಗಿದೆ. ಹೀಗಾಗಿ, ಮತ್ತಷ್ಟು ಸಮಯ ವ್ಯರ್ಥ ಮಾಡದಿರಲು ನಾವು ಅರ್ಜಿದಾರರ ಅರ್ಜಿಗಳನ್ನು ವಿಚಾರಣೆಗೆ ಅಂಗೀಕರಿಸಿದ್ದೇವೆ, ಸಾಕ್ಷ್ಯಾಧಾರಗಳು ನಾಶವಾಗಬಹುದು ಹಾಗೂ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಎಂಬ ಸಂತ್ರಸ್ತೆಯ ಪೋಷಕರ ಆತಂಕದ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ(ಸಿಬಿಐ)ದ ತನಿಖೆಗೆ ಹಸ್ತಾಂತರಿಸುತ್ತಿದ್ದೇವೆ” ಎಂದು ನ್ಯಾಯಾಲಯ ಹೇಳಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News