ಗುಜರಾತ್ | ವನತಾರಕ್ಕೆ ಭೇಟಿ ನೀಡಿದ ಡೊನಾಲ್ಡ್ ಟ್ರಂಪ್ ಪುತ್ರ
Update: 2025-11-21 21:27 IST
Screen grab : X
ಜಾಮನಗರ, ನ. 21: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪುತ್ರ ಡೊನಾಲ್ಡ್ ಟ್ರಂಪ್ ಜೂನಿಯರ್ ಗುಜರಾತ್ ನ ಜಾಮನಗರದಲ್ಲಿರುವ ವನ್ಯ ಜೀವಿ ಸಂರಕ್ಷಣೆ ಹಾಗೂ ಪುನರ್ವಸತಿ ಕೇಂದ್ರ ವನತಾರಕ್ಕೆ ಶುಕ್ರವಾರ ಭೇಟಿ ನೀಡಿದ್ದಾರೆ.
ಅಂಬಾನಿ ಕುಟುಂಬದ ಆಹ್ವಾನದ ಮೇರೆಗೆ ಡೊನಾಲ್ಡ್ ಟ್ರಂಪ್ ಜೂನಿಯರ್ ರಿಲಾಯನ್ಸ್ ಇಂಡಸ್ಟ್ರೀಸ್ ನಿರ್ದೇಶಕ ಅನಂತ್ ಅಂಬಾನಿ ಅವರ ಕನಸಿನ ಕೂಸಾಗಿರುವ ವಂತಾರಕ್ಕೆ ಭೇಟಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಡೊನಾಲ್ಡ್ ಟ್ರಂಪ್ ಜೂನಿಯರ್ ಅವರು ಅನಂತ್ ಅಂಬಾನಿ ಅವರ ಜೊತೆಗೆ ವನತಾರದಲ್ಲಿ ಸುತ್ತಾಡಿ ವನ್ಯ ಜೀವಿಗಳನ್ನು ವೀಕ್ಷಿಸಿದರು. ಅಲ್ಲದೆ ಆ ಪ್ರದೇಶದಲ್ಲಿರುವ ಕೆಲವು ದೇವಾಲಯಗಳಿಗೆ ಕೂಡ ಭೇಟಿ ನೀಡಿದರು ಎಂದು ಮೂಲಗಳು ತಿಳಿಸಿವೆ.
ಡೊನಾಲ್ಡ್ ಟ್ರಂಪ್ ಜೂನಿಯರ್ ಅವರು ಗುರುವಾರ ಆಗ್ರಾದಲ್ಲಿರುವ ತಾಜ್ ಮಹಲ್ ಗೆ ಭೇಟಿ ನೀಡಿದ್ದರು.