×
Ad

ದಿಲ್ಲಿಯಲ್ಲಿ ಹದಗೆಟ್ಟಿರುವ ಗಾಳಿಯ ಗುಣಮಟ್ಟ: ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ

Update: 2024-11-18 12:04 IST

Photo credit: PTI

ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಹದಗೆಟ್ಟಿರುವ ಗಾಳಿಯ ಗುಣಮಟ್ಟ ಕುರಿತು ದಿಲ್ಲಿ ಸರ್ಕಾರವನ್ನು ಸುಪ್ರೀಂ ಕೋರ್ಟ್ ಸೋಮವಾರ ಪ್ರಶ್ನಿಸಿದ್ದು, ಮಾಲಿನ್ಯ ವಿರೋಧಿ ಕ್ರಮಗಳನ್ನು ಅನುಷ್ಠಾನಗೊಳಿಸಲು ಯಾಕೆ ವಿಳಂಬವಾಗಿದೆ ಎಂದು ಪ್ರಶ್ನಿಸಿದೆ.

"ವಾಯು ಗುಣಮಟ್ಟ ಸೂಚ್ಯಂಕವು 300 ದಾಟಲು ನಾವು ಯಾಕೆ ಕಾಯುತ್ತಿದ್ದದೇವೆ?" ಎಂದು ಸುಪ್ರೀಂ ಕೋರ್ಟ್‌ ಪ್ರಶ್ನಿಸಿದೆ.

ರಾಷ್ಟ್ರ ರಾಜಧಾನಿಯಲ್ಲಿ ವಾಯು ಮಾಲಿನ್ಯವನ್ನು ತಡೆಗಟ್ಟಲು ಕ್ರಮಗಳನ್ನು ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

ದಿಲ್ಲಿಯ ಗಾಳಿಯ ಗುಣಮಟ್ಟವು ಈ ಋತುವಿನಲ್ಲಿ ಮೊದಲ ಬಾರಿಗೆ 'ತೀವ್ರʼವಾಗಿ ಕುಸಿದಿದೆ. ಸಿಸ್ಟಂ ಆಫ್ ಏರ್ ಕ್ವಾಲಿಟಿ ಮತ್ತು ವೆದರ್ ಫೋರ್ಕಾಸ್ಟಿಂಗ್ ಮತ್ತು ರಿಸರ್ಚ್ (SAFAR) ಡೇಟಾ ಪ್ರಕಾರ, ದೆಹಲಿಯ ವಾಯು ಗುಣಮಟ್ಟ ಸೂಚ್ಯಂಕ (AQI) ಬೆಳಿಗ್ಗೆ 481 ತಲುಪಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News