ಹೇಮಾಮಾಲಿನಿ ವಿರುದ್ಧ ಅವಹೇಳನಕಾರಿ ಹೇಳಿಕೆ | ರಣದೀಪ್ ಸಿಂಗ್ ಸುರ್ಜೇವಾಲಾಗೆ ನೋಟಿಸ್ ಜಾರಿ
Update: 2024-04-09 19:45 IST
ಹೇಮಾಮಾಲಿನಿ - ಸುರ್ಜೇವಾಲಾ | Photo : PTI
ಹೊಸದಿಲ್ಲಿ: ನಟಿ, ಬಿಜೆಪಿ ಸಂಸದೆ ಹೇಮಾಮಾಲಿನಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾಗೆ ಚುನಾವಣಾ ಆಯೋಗ ನೋಟಿಸ್ ನೀಡಿದೆ.
ಬಿಜೆಪಿ ಸಂಸದೆ ಹೇಮಾ ಮಾಲಿನಿ ಅವರ ಸೌಂದರ್ಯದ ಕಾರಣಕ್ಕಾಗಿಯೇ ಸಂಸದೆಯನ್ನಾಗಿ ಆಯ್ಕೆ ಮಾಡಲಾಗಿದೆ. ಲೋಕಸಭೆಯಲ್ಲಿ ಸಂಸದರು ಆಕೆಯನ್ನೇ ನೋಡುತ್ತಿರುತ್ತಾರೆ ಎಂದು ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿಕೆ ನೀಡಿದ್ದರು.
ಹೇಳಿಕೆ ವಿವಾದದ ಸ್ವರೂಪ ಪಡೆದುಕೊಂಡಂತೆ, ಸುರ್ಜೇವಾಲಾ ಅವರ ವಿರುದ್ಧ ರಾಷ್ಟ್ರೀಯ ಮಹಿಳಾ ಆಯೋಗವು ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.