×
Ad

7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಘೋಷಣೆ

Update: 2024-06-10 13:52 IST

ಹೊಸದಿಲ್ಲಿ: ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು, ಮಧ್ಯಪ್ರದೇಶ, ಉತ್ತರಾಖಂಡ, ಪಂಜಾಬ್ ಹಾಗೂ ಹಿಮಾಚಲ ಪ್ರದೇಶ ಸೇರಿದಂತೆ ಒಟ್ಟು 7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದೆ.

ಜುಲೈ 10ರಂದು ಉಪ ಚುನಾವಣೆಗಳು ನಡೆಯಲಿದ್ದು, ಜುಲೈ 13ರಂದು ಮತ ಎಣಿಕೆ ನಡೆಯಲಿದೆ.

ನಾಮಪತ್ರ ಸಲ್ಲಿಸಲು ಜೂನ್ 21 ಕೊನೆಯ ದಿನಾಂಕವಾಗಿದ್ದು, ನಾಮಪತ್ರಗಳನ್ನು ಹಿಂಪಡೆಯಲು ಜೂನ್ 26 ಕೊನೆಯ ದಿನಾಂಕವಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News