ಬಿಹಾರ | ಮತದಾರರ ಅಂತಿಮ ಪಟ್ಟಿ ಬಿಡುಗಡೆ ಮಾಡಿದ ಚುನಾವಣಾ ಆಯೋಗ
Update: 2025-09-30 17:42 IST
Photo | PTI
ಪಾಟ್ನಾ : ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಬಿಹಾರದ ಮತದಾರರ ಅಂತಿಮ ಪಟ್ಟಿಯನ್ನು ಚುನಾವಣಾ ಆಯೋಗ ಬಿಡುಗಡೆ ಮಾಡಿದೆ.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವೇಳೆ ಕೇಳಿ ಬಂದಿದ್ದ ಎಲ್ಲಾ ಆಕ್ಷೇಪಣೆಗಳನ್ನು ಮತ್ತು ಬೇಡಿಕೆಗಳನ್ನು ಪರಿಶೀಲಿಸಿದ ನಂತರ ಈ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಚುನಾವಣಾ ಆಯೋಗ ಹೇಳಿಕೊಂಡಿದೆ.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ ಭಾಗವಾಗಿ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಜನರು voters.eci.gov.in ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ತಮ್ಮ ಹೆಸರುಗಳನ್ನು ಪರಿಶೀಲಿಸಬಹುದು ಎಂದು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದೆ.