×
Ad

ಪಂಚರಾಜ್ಯ ಚುನಾವಣೆಗಳ ದಿನಾಂಕ ಇಂದು ಪ್ರಕಟ

Update: 2023-10-09 11:19 IST

ಹೊಸದಿಲ್ಲಿ: ಭಾರತೀಯ ಚುನಾವಣಾ ಆಯೋಗವು ಪಂಚ ರಾಜ್ಯಗಳ ಚುನಾವಣಾ ದಿನಾಂಕವನ್ನು ಇಂದು ಮಧ್ಯಾಹ್ನ 12 ಗಂಟೆಗೆ ಪ್ರಕಟಿಸಲಿದೆ ಎಂದು PTI ಸುದ್ದಿ ಸಂಸ್ಥೆ ವರದಿ ಮಾಡಿದೆ.

ಚುನಾವಣಾ ಆಯೋಗವು ಮಧ್ಯಪ್ರದೇಶ, ಛತ್ತೀಸ್ ಗಢ, ರಾಜಸ್ಥಾನ, ತೆಲಂಗಾಣ ಹಾಗೂ ಮಿಝೋರಾಂ ರಾಜ್ಯಗಳಿಗೆ ಇಂದು ಚುನಾವಣಾ ದಿನಾಂಕ ಘೋಷಿಸಲಿದೆ.

ಮಿಝೋರಾಂ ವಿಧಾನಸಭೆಗೆ ಅವಧಿಯು ಡಿಸೆಂಬರ್ 17ಕ್ಕೆ ಅಂತ್ಯವಾಗಲಿದೆ. ಈ ಈಶಾನ್ಯ ರಾಜ್ಯದಲ್ಲಿ ಮಿಝೋ ನ್ಯಾಶನಲ್ ಫ್ರಂಟ್ ಸರ್ಕಾರ ಅಸ್ತಿತ್ವದಲ್ಲಿದೆ.

ಆದರೆ, ತೆಲಂಗಾಣ, ರಾಜಸ್ಥಾನ, ಛತ್ತೀಸ್ ಗಢ ಹಾಗೂ ಮಧ್ಯಪ್ರದೇಶದ ವಿಧಾನಸಭೆಗಳ ಅವಧಿಯು ಮುಂದಿನ ವರ್ಷದ ಜನವರಿಯ ವಿವಿಧ ದಿನಾಂಕಗಳಂದು ಅಂತ್ಯಗೊಳ್ಳಲಿದೆ.



Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News