×
Ad

ಚುನಾವಣಾ ಸಿದ್ಧತೆ: ಖರ್ಗೆ, ರಾಹುಲ್ ಭೇಟಿಯಾದ ತೇಜಸ್ವಿ ಯಾದವ್

Update: 2025-04-15 21:51 IST

 ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತು ತೇಜಸ್ವಿ ಯಾದವ್ | PTI 

ಹೊಸದಿಲ್ಲಿ: ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗೆ ಮಹಾಘಟಬಂಧನದ ಸಿದ್ಧತೆಯ ಬಗ್ಗೆ ಚರ್ಚಿಸುವುದಕ್ಕಾಗಿ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಮಂಗಳವಾರ ಇಲ್ಲಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರನ್ನು ಭೇಟಿಯಾದರು.

ಆರ್‌ಜೆಡಿ ಸಂಸದರಾದ ಮನೋಜ್ ಝಾ ಮತ್ತು ಸಂಜಯ್ ಯಾದವ್ ಜೊತೆಗೆ ತೇಜಸ್ವಿ ಯಾದವ್, ಖರ್ಗೆ ನಿವಾಸದಲ್ಲಿ ಕಾಂಗ್ರೆಸ್ ನಾಯಕರನ್ನು ಭೇಟಿಯಾದರು.

ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ತೇಜಸ್ವಿ, ರಾಜ್ಯದಲ್ಲಿ ಇಂಡಿಯಾ ಮೈತ್ರಿಕೂಟವು ಮುಂದಿನ ಸರಕಾರವನ್ನು ರಚಿಸಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಮಹಾಘಟಬಂಧನದ ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂಬ ಬಗ್ಗೆ ಊಹಾಪೋಹದಲ್ಲಿ ತೊಡಗದಂತೆ ಅವರು ಮಾಧ್ಯಮಗಳಿಗೆ ಮನವಿ ಮಾಡಿದರು. ಘಟಕ ಪಕ್ಷಗಳು ತಮ್ಮೊಳಗೆ ಮಾತುಕತೆ ನಡೆಸಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ನಿರ್ಧರಿಸುತ್ತವೆ ಎಂದು ಅವರು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News