ಎಎಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗಿದೆ : ಸೌರಭ್ ಭಾರದ್ವಾಜ್
Photo | NDTV
ಹೊಸದಿಲ್ಲಿ: ದಿಲ್ಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಮಧ್ಯೆ ಎಎಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಲಾಗಿದೆ ಎಂದು ದಿಲ್ಲಿ ಸಚಿವ, ಗ್ರೇಟರ್ ಕೈಲಾಶ್ ಕ್ಷೇತ್ರದ ಎಎಪಿ ಅಭ್ಯರ್ಥಿ ಸೌರಭ್ ಭಾರದ್ವಾಜ್ ಹೇಳಿದ್ದಾರೆ.
ಚುನಾವಣಾ ಫಲಿತಾಂಶಗಳ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಸೌರಭ್ ಭಾರದ್ವಾಜ್, ಎಎಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಲಾಗಿದೆ ಎಂದು ಹೇಳಿದ್ದು, ಅರವಿಂದ್ ಕೇಜ್ರಿವಾಲ್ ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗುವ ಬಗ್ಗೆ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
́ಎಎಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗಿದೆ. ಈಡಿ, ಸಿಬಿಐ, ಆದಾಯ ತೆರಿಗೆ, ಚುನಾವಣಾ ಆಯೋಗ, ಪೊಲೀಸ್ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಗಳನ್ನು ಎಎಪಿ ವಿರುದ್ಧ ಬಳಸಲಾಗಿದೆ. ಆದರೆ ಜನರ ಆಶೀರ್ವಾದ ಎಎಪಿ ಜೊತೆಗಿದೆ. ಜನರು ಅರವಿಂದ್ ಕೇಜ್ರಿವಾಲ್ ಅವರನ್ನು 4ನೇ ಬಾರಿಗೆ ಮುಖ್ಯಮಂತ್ರಿ ಮಾಡಲಿದ್ದಾರೆ. ಅವರು ಮುಖ್ಯಮಂತ್ರಿಯಾಗಿ ಶೀಘ್ರದಲ್ಲೇ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಹೇಳಿದ್ದಾರೆ.