ಉಪರಾಷ್ಟ್ರಪತಿ ಚುನಾವಣೆ | ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯಾಗಿ ಮಾಜಿ ನ್ಯಾಯಮೂರ್ತಿ ಸುದರ್ಶನ್ ರೆಡ್ಡಿ ಆಯ್ಕೆ
Update: 2025-08-19 13:11 IST
ಬಿ ಸುದರ್ಶನ್ ರೆಡ್ಡಿ (Photo:X/@sansad_tv)
ಹೊಸದಿಲ್ಲಿ : ಸೆಪ್ಟೆಂಬರ್ 9 ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಮತ್ತು ಗೋವಾದ ಮೊದಲ ಲೋಕಾಯುಕ್ತ ನ್ಯಾಯಮೂರ್ತಿ(ನಿವೃತ್ತ) ಬಿ ಸುದರ್ಶನ್ ರೆಡ್ಡಿ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ.
ದೇಶದ ಎರಡನೇ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ನಡೆಯುವ ಚುನಾವಣೆಗೆ ಸುದರ್ಶನ್ ರೆಡ್ಡಿ ಅವರು ಎನ್‌ಡಿಎ ಅಭ್ಯರ್ಥಿ ಮಹಾರಾಷ್ಟ್ರ ರಾಜ್ಯಪಾಲ, ಬಿಜೆಪಿಯ ಹಿರಿಯ ನಾಯಕ ಸಿಪಿ ರಾಧಾಕೃಷ್ಣನ್ ಅವರ ವಿರುದ್ಧ ಸ್ಪರ್ಧಿಸಲಿದ್ದಾರೆ