ಫೆ. 17ರಂದು ಹಾಜರಾಗುವಂತೆ ಕೇಜ್ರಿವಾಲ್ ಗೆ ದಿಲ್ಲಿ ಕೋರ್ಟ್ ಸಮನ್ಸ್
Update: 2024-02-07 23:22 IST
ಅರವಿಂದ ಕೇಜ್ರಿವಾಲ್ | Photo: PTI
ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಜಾರಿಗೊಳಿಸಿದ 5 ಸಮನ್ಸ್ಗಳನ್ನು ಅನುಸರಿಸದೇ ಇರುವುದರಿಂದ ಫೆಬ್ರವರಿ 17ರಂದು ತನ್ನ ಮುಂದೆ ಹಾಜರಾಗುವಂತೆ ದಿಲ್ಲಿ ನ್ಯಾಯಾಲಯ ಬುಧವಾರ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ನಿರ್ದೇಶಿಸಿದೆ.
ಐದನೇ ಸಮನ್ಸ್ಗೆ ಕೂಡ ಹಾಜರಾಗದ ಹಿನ್ನೆಲೆಯಲ್ಲಿ ಅರವಿಂದ ಕೇಜ್ರಿವಾಲ್ ಅವರ ವಿರುದ್ಧ ಜಾರಿ ನಿರ್ದೇಶನಾಲಯ ಫೆಬ್ರವರಿ 2ರಂದು ದಿಲ್ಲಿ ನ್ಯಾಯಾಲಯದ ಮೆಟ್ಟಿಲೇರಿತ್ತು.