×
Ad

ಜಮ್ಮುಕಾಶ್ಮೀರದ ಸೋಪೋರ್ನ ಗುಜರಿ ಅಂಗಡಿಯಲ್ಲಿ ಸ್ಫೋಟ: ನಾಲ್ವರು ಮೃತ್ಯು

Update: 2024-07-29 20:29 IST

ಸಾಂದರ್ಭಿಕ ಚಿತ್ರ

ಶ್ರೀನಗರ: ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ಪಟ್ಟಣದಲ್ಲಿ ಸೋಮವಾರ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ಮೃತಪಟ್ಟಿರುವುದು ವರದಿಯಾಗಿದೆ.

ಪಟ್ಟಣದ ಶೇರ್ ಕಾಲನಿಯಲ್ಲಿಯ ಗುಜರಿ ಅಂಗಡಿಯಲ್ಲಿ ಸ್ಫೋಟ ಸಂಭವಿಸಿದ್ದು,ಈ ಸಂದರ್ಭದಲ್ಲಿ ಕೆಲವರು ಲಾರಿಯಿಂದ ಗುಜರಿ ಸಾಮಗ್ರಿಗಳನ್ನು ಕೆಳಗಿಳಿಸುತ್ತಿದ್ದರು ಎಂದು ವರದಿಗಳು ತಿಳಿಸಿವೆ.

ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದರೆ,ತೀವ್ರವಾಗಿ ಗಾಯಗೊಂಡಿದ್ದ ಇತರ ಇಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತರನ್ನು ಶೇರ್ ಕಾಲನಿ ನಿವಾಸಿಗಳಾದ ನಝೀರ್ ಅಹ್ಮದ್ ನದ್ರೂ(40),ಆಝಿಂ ಅಷ್ರಫ್ ಮಿರ್(20),ಆದಿಲ್ ರಶೀದ್ ಭಟ್(23) ಮತ್ತು ಮುಹಮ್ಮದ್ ಅಝರ್(25) ಎಂದು ಗುರುತಿಸಲಾಗಿದೆ.

ಸ್ಫೋಟದ ನಿಖರ ಸ್ವರೂಪ ಮತ್ತು ಕಾರಣ ತಕ್ಷಣಕ್ಕೆ ತಿಳಿದುಬಂದಿಲ್ಲ. ವಿಧಿವಿಜ್ಞಾನ ತಜ್ಞರ ತಂಡವು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News