ಮಹಾರಾಷ್ಟ್ರದ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ; ಓರ್ವ ಕಾರ್ಮಿಕ ಸಾವು, ನಾಲ್ವರಿಗೆ ಗಾಯ
Update: 2024-01-18 21:18 IST
ಸಾಂದರ್ಭಿಕ ಚಿತ್ರ | Photo : PTI
ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ರಾಸಾಯನಿಕ ಉತ್ಪಾದನಾ ಕಾರ್ಖಾನೆಯಲ್ಲಿ ಗುರುವಾರ ಸರಣಿ ಸ್ಫೋಟ ಸಂಭವಿಸಿ ಬೆಂಕಿ ಹತ್ತಿಕೊಂಡ ಪರಿಣಾಮ ಓರ್ವ ಕಾರ್ಮಿಕ ಮೃತಪಟ್ಟು ಹಾಗೂ ಇತರ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಾಯಗೊಂಡ ಕಾರ್ಮಿಕರನ್ನು ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ದುರ್ಘಟನೆ ಇಲ್ಲಿನ ಕೈಗಾರಿಕಾ ಪ್ರದೇಶದಲ್ಲಿ ಮುಂಜಾನೆ 4.30ಕ್ಕೆ ಸಂಭವಿಸಿದೆ ಎಂದು ಥಾಣೆ ನಗರಪಾಲಿಕೆಯ ವಿಪತ್ತು ನಿರ್ವಹಣಾ ಸೆಲ್ ನ ಮುಖ್ಯಸ್ಥ ಯಾಸಿನ್ ತಡ್ವಿ ತಿಳಿಸಿದ್ದಾರೆ.
ರಾಸಾಯನಿಕ ತುಂಬಿದ್ದ ಡ್ರಮ್ ಗಳು ಸ್ಫೋಟಗೊಂಡು ಬೆಂಕಿ ಹತ್ತಿಕೊಂಡಿತು. ಇದರಿಂದ ಹೊರಗಡೆ ಪಾರ್ಕ್ ಮಾಡಲಾಗಿದ್ದ ಹಲವು ವಾಹನಗಳು ಬೆಂಕಿಗಾಹುತಿಯಾದವು. ಓರ್ವ ಕಾರ್ಮಿಕ ಸಾವನ್ನಪ್ಪಿದ ಹಾಗೂ ಇತರ ನಾಲ್ವರು ಗಾಯಗೊಂಡರು ಎಂದು ಅವರು ತಿಳಿಸಿದ್ದಾರೆ.