×
Ad

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

Update: 2024-10-20 17:42 IST

ಸಾಂದರ್ಭಿಕ ಚಿತ್ರ (PTI)

ಮಹಾರಾಷ್ಟ್ರ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಬಿಜೆಪಿ 99 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

288 ಸ್ಥಾನಗಳನ್ನು ಹೊಂದಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 160 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಇನ್ನುಳಿದ ಸ್ಥಾನಗಳಲ್ಲಿ ಮಿತ್ರಪಕ್ಷಗಳಾದ ಶಿವಸೇನೆ ಮತ್ತು ಅಜಿತ್ ಪವಾರ್ ನೇತೃತ್ವದ ಎನ್ಸಿಪಿ ಸ್ಪರ್ಧಿಸಲಿದೆ.

ಬಿಜೆಪಿಯ ಭದ್ರ ಕೋಟೆಯಾಗಿರುವ ನಾಗ್ಪುರ ಪಶ್ಚಿಮ ವಿಧಾನಸಭಾ ಕ್ಷೇತ್ರದಿಂದ ದೇವೇಂದ್ರ ಫಡ್ನವೀಸ್ ಅವರಿಗೆ ಟಿಕೆಟ್ ನೀಡಲಾಗಿದೆ. ಇದಲ್ಲದೆ ನಾಗ್ಪುರ ಜಿಲ್ಲೆಯ ಕಮ್ತಿಯಿಂದ ರಾಜ್ಯ ಬಿಜೆಪಿ ಮುಖ್ಯಸ್ಥ ಚಂದ್ರಶೇಖರ ಬವಾಂಕುಲೆ ಅವರಿಗೆ ಬಿಜೆಪಿ ಟಿಕೆಟ್ ಘೋಷಿಸಲಾಗಿದೆ.

ಬಲ್ಲಾರ್ಪುರ ಕ್ಷೇತ್ರದಲ್ಲಿ ಹಾಲಿ ಸಚಿವ ಸುಧೀರ್ ಮುಂಗಂತಿವಾರ್, ಕೇಂದ್ರ ಸಚಿವ ರಾವ್ಸಾಹೇಬ್ ದಾನ್ವೆ ಅವರ ಪುತ್ರ ಸಂತೋಷ್ ಅವರಿಗೆ ಭೋಕರ್ದಾನ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡಿದೆ.

ಇದಲ್ಲದೆ ಭೋಕರ್ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಅವರ ಪುತ್ರಿ ಶ್ರೀಜಯ ಚವಾಣ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಮುಲುಂಡ್ ಕ್ಷೇತ್ರದಿಂದ ಹಾಲಿ ಶಾಸಕ ಮಿಹಿರ್ ಕೊಟೆಚಾಗೆ ಮತ್ತು ಮುಂಬೈನ ಘಾಟ್ಕೋಪರ್ ಪಶ್ಚಿಮ ಕ್ಷೇತ್ರದಿಂದ ಶಾಸಕ ರಾಮ್ ಕದಮ್ ಗೆ ಟಿಕೆಟ್ ನೀಡಲಾಗಿದೆ.

ಬಿಜೆಪಿ ಮುಂಬೈ ಘಟಕದ ಮುಖ್ಯಸ್ಥ ಆಶಿಶ್ ಶೇಲಾರ್ ವಂಡ್ರೆ ಪಶ್ಚಿಮದಿಂದ ಮತ್ತು ಸಚಿವ ಚಂದ್ರಕಾಂತ್ ಪಾಟೀಲ್ ಕೊತ್ರೂಡ್ನಿಂದ ಸ್ಪರ್ಧಿಸಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News