×
Ad

ಉತ್ತರ ಪ್ರದೇಶ| ದಲಿತ ಬಾಲಕಿಯರ ಆತ್ಮಹತ್ಯೆ: ಪ್ರಚೋದನೆ ನೀಡಿದ ಆರೋಪದಲ್ಲಿ ಇಬ್ಬರು ಯುವಕರ ಮೇಲೆ ಪ್ರಕರಣ ದಾಖಲು

Update: 2024-08-30 14:29 IST

Photo credit: indiatoday.in

ಲಕ್ನೊ: ಉತ್ತರ ಪ್ರದೇಶದ ಫರೂಕಾಬಾದ್‌ನಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಇಬ್ಬರು ದಲಿತ ಬಾಲಕಿಯರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ಶುಕ್ರವಾರ ಇಬ್ಬರು ಯುವಕರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣವನ್ನು ದಾಖಲಿಸಿದ್ದಾರೆ.

ಪೊಲೀಸರ ಪ್ರಕಾರ, ಇಬ್ಬರು ಆರೋಪಿಗಳನ್ನು ಪವನ್ ಮತ್ತು ದೀಪಕ್ ಎಂದು ಗುರುತಿಸಲಾಗಿದೆ. ಇಬ್ಬರೂ ಜಾತವ್ ಸಮುದಾಯದವರು. ಆರೋಪಿಗಳು ಬಾಲಕಿಯರಿಗೆ ಫೋನ್ ಮೂಲಕ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ತನಿಖೆಯ ವೇಳೆ ವಶಪಡಿಸಿಕೊಂಡ ಸಿಮ್ ಕಾರ್ಡ್ ಪವನ್ ಹೆಸರಿನಲ್ಲಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 108 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

15 ಮತ್ತು 18 ವರ್ಷ ವಯಸ್ಸಿನ ಇಬ್ಬರು ದಲಿತ ಬಾಲಕಿಯರ ಮೃತದೇಹಗಳು ಮಂಗಳವಾರ ಬೆಳಗ್ಗೆ ಉತ್ತರ ಪ್ರದೇಶದ ಫರೂಕಾಬಾದ್‌ನ ಕಾಯಮ್‌ಗಂಜ್ ಬಳಿಯ ಹಳ್ಳಿಯ ಮೊಂಗೋಳದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News