×
Ad

ಲೈಂಗಿಕ ದೌರ್ಜನ್ಯ ಆರೋಪ: ಕ್ರಿಕೆಟಿಗ ಯಶ್ ದಯಾಳ್ ವಿರುದ್ಧ ಎಫ್ಐಆರ್ ದಾಖಲು

Update: 2025-07-08 11:36 IST

ಯಶ್ ದಯಾಳ್ (Photo: PTI)

ಗಾಝಿಯಾಬಾದ್ : ಉತ್ತರ ಪ್ರದೇಶದ ಗಾಝಿಯಾಬಾದ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕ್ರಿಕೆಟಿಗ ಯಶ್ ದಯಾಳ್ ವಿರುದ್ಧ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಯಶ್ ದಯಾಳ್ (27) ವಿರುದ್ಧ ಇಂದಿರಾಪುರಂ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಸೆಕ್ಷನ್ 69ರಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೋರ್ವರು ತಿಳಿಸಿದ್ದಾರೆ.

ಜೂನ್ 21ರಂದು ಮಹಿಳೆಯೊಬ್ಬರು ಈ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಅವರಿಗೆ ದೂರು ನೀಡಿದ್ದರು, ಐದು ವರ್ಷಗಳಿಂದ ಯಶ್ ದಯಾಳ್ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News