×
Ad

ಸುಗಂಧ ದ್ರವ್ಯ ಕಾರ್ಖಾನೆಯಲ್ಲಿ ಬೆಂಕಿ ಅವಘಡ : 32 ಮಂದಿಗೆ ಗಾಯ

Update: 2024-02-02 21:29 IST

ಸೋಲನ್ : ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯ ಬುಡ್ಡಿ ಪ್ರದೇಶದ ಸುಗಂಧ ದ್ರವ್ಯ ಕಾರ್ಖಾನೆಯಲ್ಲಿ ಶುಕ್ರವಾರ ಸಂಜೆ ಬೆಂಕಿ ಅವಘಡ ಸಂಭವಿಸಿದ್ದು 32 ಮಂದಿ ಗಾಯಗೊಂಡಿದ್ದಾರೆ ಎಂದು ಎ ಎನ್ ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಕಾರ್ಖಾನೆಯಲ್ಲಿ ದೊಡ್ಡಮಟ್ಟದ ಬೆಂಕಿ ಮತ್ತು ಹೊಗೆಯು ಕಾಣಿಸಿಕೊಂಡಿತು ಎನ್ನಲಾಗಿದೆ. ತಕ್ಷಣವೇ ಎನ್ ಡಿ ಆರ್ ಎಫ್ ಮತ್ತು ಅಗ್ನಿಶಾಮಕ ದಳದ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದೆ ಎಂದು ತಿಳಿದು ಬಂದಿದೆ. ರಕ್ಷಣಾ ತಂಡಗಳು 41 ಜನರನ್ನು ರಕ್ಷಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿ ಅವಘಡಕ್ಕೆ ಕಾರಣಗಳೇನು ಎನ್ನುವುದು ಇನ್ನೂ ತಿಳಿದುಬಂದಿಲ್ಲ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News