×
Ad

ಔಷಧ ಕಾರ್ಖಾನೆಯಲ್ಲಿ ಬೆಂಕಿ ಅವಘಡ; 7 ಮಂದಿ ಸಾವು, ಹಲವರಿಗೆ ಗಾಯ

Update: 2023-11-04 23:07 IST

Photo- PTI

ರಾಯಗಢ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಔಷಧ ಕಾರ್ಖಾನೆಯೊಂದರಲ್ಲಿ ಶುಕ್ರವಾರ ಸ್ಫೋಟದಿಂದ ಸಂಭವಿಸಿದ ಬೆಂಕಿ ದುರಂತದಲ್ಲಿ ಕನಿಷ್ಠ 7 ಮಂದಿ ಮೃತಪಟ್ಟಿದ್ದಾರೆ ಹಾಗೂ ಹಲವರು ಗಾಯಗೊಂಡಿದ್ದಾರೆ.

ರಾಯಗಢ ಜಿಲ್ಲೆಯಲ್ಲಿ ಬ್ಲೂ ಜೆಟ್ ಹೆಲ್ತ್‌ಕೇರ್‌ನಲ್ಲಿ ಶುಕ್ರವಾರ ಬೆಳಗ್ಗೆ ಸುಮಾರು 11 ಗಂಟೆಗೆ ಬೆಂಕಿ ಕಾಣಿಸಿಕೊಂಡಿತು ಎಂದು ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆ (ಎನ್‌ಡಿಆರ್‌ಎಫ್) ಹೇಳಿದೆ.

‘‘ನಿನ್ನೆ ರಾತ್ರಿ ಸ್ಫೋಟ ಸಂಭವಿಸಿದ ರಾಯಗಢ ಜಿಲ್ಲೆಯ ಮಹಾಡ್ ಎಂಐಡಿಸಿಯಲ್ಲಿರುವ ಬ್ಲೂ ಜೆಟ್ ಹೆಲ್ತ್‌ಕೇರ್‌ನಲ್ಲಿ ಎನ್‌ಡಿಆರ್‌ಎಫ್ ಮತ್ತೊಂದು ಮೃತದೇಹವನ್ನು ಪತ್ತೆ ಹಚ್ಚಿದೆ. ಇದರೊಂದಿಗೆ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ’’ ಎಂದು ಅದು ತಿಳಿಸಿದೆ.

ಶಾರ್ಟ್ ಸರ್ಕ್ಯೂಟ್‌ನಿಂದ ಈ ಬೆಂಕಿ ದುರಂತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.

ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ನಂತರ ಬೆಂಕಿ ಕಾಣಿಸಿಕೊಂಡಿದೆ. ಇದು ರಾಸಾಯನಿಕಗಳನ್ನು ಸಂಗ್ರಹಿಸಿ ಇರಿಸಿದ್ದ ಬ್ಯಾರೆಲ್‌ಗಳು ಸ್ಫೋಟಗೊಳ್ಳಲು ಕಾರಣವಾಯಿತು ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದರು. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News