×
Ad

ಲಕ್ನೋ | ಸರ್ಕಾರಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 200 ರೋಗಿಗಳ ರಕ್ಷಣೆ

Update: 2025-04-15 07:18 IST

PC | timesofindia

ಲಕ್ನೋ : ಇಲ್ಲಿನ ಲೋಕಬಂಧು ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ 10 ಗಂಟೆಯ ಸುಮಾರಿಗೆ ಬೆಂಕಿ ಅನಾಹುತ ಸಂಭವಿಸಿ ರೋಗಿಗಳು ಮತ್ತು ಸಿಬ್ಬಂದಿ ಆತಂಕಿತರಾದರು. ಇಡೀ ಆಸ್ಪತ್ರೆ ಆವರಣದಲ್ಲಿ ದಟ್ಟವಾದ ಹೊಗೆ ವ್ಯಾಪಿಸಿದ್ದು, ತೀವ್ರ ನಿಗಾ ಘಟಕದಲ್ಲಿದ್ದ ರೋಗಿಗಳು ಸೇರಿದಂತೆ 200ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಲಾಗಿದೆ.

ಆಸ್ಪತ್ರೆಯ ಎರಡನೇ ಮಹಡಿಯಲ್ಲಿದ್ದ ಮಹಿಳಾ ಔಷಧಿ ಮತ್ತು ತುರ್ತುಚಿಕಿತ್ಸಾ ವಾರ್ಡ್‍ನಲ್ಲಿ ಸಂಭವಿಸಿದ ವಿದ್ಯುತ್ ಶಾರ್ಟ್‍ಸಕ್ರ್ಯೂಟ್‍ನಿಂದ ಈ ಅವಘಡ ಸಂಭವಿಸಿರಬೇಕು ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.

ಕ್ಷಣಾರ್ಧದಲ್ಲಿ ಇಡೀ ಮಹಡಿಗೆ ಬೆಂಕಿ ವ್ಯಾಪಿಸಿತು ಎನ್ನಲಾಗಿದೆ.

ಘಟನೆಯಲ್ಲಿ ಗಾಯಗೊಂಡ ರೋಗಿಯೊಬ್ಬರನ್ನು ಎಸ್‍ಪಿಐಎಂಎಸ್ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ದಾರಿಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದ್ದು, ಅಧಿಕಾರಿಗಳು ಇದನ್ನು ದೃಢಪಡಿಸಿಲ್ಲ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News