ದಿಲ್ಲಿ | ಇಂದೋರ್‌ಗೆ ಹಾರಟ ನಡೆಸುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ : ತುರ್ತು ಭೂಸ್ಪರ್ಶ
Update: 2025-08-31 19:02 IST
ಏರ್ ಇಂಡಿಯಾ | PC: X\ @airindia
ಹೊಸದಿಲ್ಲಿ: ದಿಲ್ಲಿಯಿಂದ ಇಂದೋರ್‌ಗೆ ಹಾರಟ ನಡೆಸುತ್ತಿದ್ದ ಏರ್ ಇಂಡಿಯಾ ವಿಮಾನ ರವಿವಾರ ಟೇಕ್ ಆಫ್ ಆದ ಕೆಲವೇ ಕ್ಷಣದಲ್ಲಿ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ದಿಲ್ಲಿಗೆ ವಾಪಾಸ್ಸಾಗಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಮೂಲಗಳು ತಿಳಿಸಿವೆ.
ಇಂದು ಬೆಳಿಗ್ಗೆ 6:15ರ ಸುಮಾರಿಗೆ AI2913 ವಿಮಾನ ದಿಲ್ಲಿ ವಿಮಾನ ನಿಲ್ದಾಣದಿಂದ ಇಂದೋರ್‌ಗೆ ಹೊರಟಿತ್ತು. ವಿಮಾನದಲ್ಲಿ 90ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ವಿಮಾನದ ಬಲ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಬಳಿಕ ದಿಲ್ಲಿ ವಿಮಾನ ನಿಲ್ದಾಣಕ್ಕೆ ವಾಪಾಸ್ಸಾಯಿತು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ವಿಮಾನ ದಿಲ್ಲಿಯಲ್ಲಿ ಸುರಕ್ಷಿತವಾಗಿ ಇಳಿಸುವ ಮೂಲಕ ಪೈಲಟ್‌ಗಳು ಸಂಭಾವ್ಯ ಅನಾಹುತ ತಪ್ಪಿಸಿದ್ದಾರೆ ಎಂದು ಏರ್ ಇಂಡಿಯಾ ತಿಳಿಸಿದೆ.