ಗುರುಗ್ರಾಮ |ಯೂಟ್ಯೂಬರ್ ಎಲ್ವಿಶ್ ಯಾದವ್ ನಿವಾಸದ ಮೇಲೆ ಗುಂಡಿನ ದಾಳಿ
ಎಲ್ವಿಶ್ ಯಾದವ್ (Photo credit: moneycontrol.com)
ಗುರುಗ್ರಾಮ: ಯೂಟ್ಯೂಬರ್ ಎಲ್ವಿಶ್ ಯಾದವ್ ಅವರ ಸೆಕ್ಟರ್ 57ರ ನಿವಾಸದ ಮೇಲೆ ಬೈಕ್ ನಲ್ಲಿ ಬಂದ ಮೂವರು ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ರವಿವಾರ ಬೆಳಗ್ಗೆ ಎಲ್ವಿಶ್ ಯಾದವ್ ನಿವಾಸದ ಮೇಲೆ 12 ಸುತ್ತಿನ ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳು, ನಂತರ ಸ್ಥಳದಿಂದ ಪರಾರಿಯಾಗಿದ್ದಾರೆ.
ಘಟನೆ ನಡೆದಾಗ ಎಲ್ವಿಶ್ ಯಾದವ್ ತಮ್ಮ ಮನೆಯಲ್ಲಿರಲಿಲ್ಲ. ಅವರು ಕುಟುಂಬಸ್ಥರು ಮಾತ್ರ ಇದ್ದರು. ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಅವರು ಹೇಳಿದ್ದಾರೆ.
“ಈ ಘಟನೆಗೂ ಮುನ್ನ ಎಲ್ವಿಶ್ ಯಾದವ್ ಗೆ ಯಾವುದೇ ರೀತಿಯ ಬೆದರಿಕೆ ಬಂದಿರಲಿಲ್ಲ. ಅವರು ಸದ್ಯ ಹರ್ಯಾಣದ ಹೊರಗಿದ್ದಾರೆ” ಎಂದು ಕುಟುಂಬದ ಸದಸ್ಯರು ಮಾಹಿತಿ ನೀಡಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಸಿಸಿಟಿವಿ ದೃಶ್ಯಾತವಳಿಗಳನ್ನು ಪರಿಶೀಲಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಹೆಚ್ಚಿನ ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.