×
Ad

ಏರ್ ಇಂಡಿಯಾ ವಿಮಾನ ದುರಂತ: ಮೃತ ಐವರ ಗುರುತು ಪತ್ತೆ, ಕುಟುಂಬಕ್ಕೆ ಮೃತದೇಹಗಳ ಹಸ್ತಾಂತರ

Update: 2025-06-13 15:30 IST

Photo credit: PTI

ಅಹ್ಮದಾಬಾದ್ : ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತ 265 ಮಂದಿಯ ಗುರುತು ಪತ್ತೆ ಹಚ್ಚಲು ಅಧಿಕಾರಿಗಳು ಡಿಎನ್ಎ ಮಾದರಿಗಳನ್ನು ಸಂಗ್ರಹಿಸುತ್ತಿದ್ದಾರೆ. ಶುಕ್ರವಾರ ಐವರ ಗುರುತನ್ನು ಪತ್ತೆಹಚ್ಚಿ ಮೃತದೇಹಗಳನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ.

ಇವರಲ್ಲಿ ತಲಾ ಇಬ್ಬರು ರಾಜಸ್ಥಾನ ಮತ್ತು ಗುಜರಾತ್‌ನ ಭಾವನಗರದವರು ಮತ್ತು ಓರ್ವರು ಮಧ್ಯಪ್ರದೇಶದವರು ಎಂದು ತಿಳಿದು ಬಂದಿದೆ.

ʼಅಹ್ಮದಾಬಾದ್ ಸಿವಿಲ್ ಆಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೊಠಡಿಯಲ್ಲಿ 70 ರಿಂದ 80 ವೈದ್ಯರ ತಂಡವನ್ನು ನಿಯೋಜಿಸಲಾಗಿದೆ. ಇಲ್ಲಿಯವರೆಗೆ ಗುರುತು ಪತ್ತೆಹಚ್ಚಲಾದ ಐವರ ಮೃತದೇಹವನ್ನು ಅವರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆʼ ಎಂದು ಗುಜರಾತ್ ಸರಕಾರ ಹೇಳಿಕೆಯಲ್ಲಿ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News