ದಿಲ್ಲಿ-ಜೈಪುರ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದ ಥಾರ್: ಐವರು ಮೃತ್ಯು
Update: 2025-09-27 13:59 IST
Photo: PTI
ಹೊಸದಿಲ್ಲಿ: ಆರು ಮಂದಿ ಪ್ರಯಾಣಿಸುತ್ತಿದ್ದ ಮಹೀಂದ್ರ ಥಾರ್ ಕಾರು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು, ಹಲವು ಪಲ್ಟಿ ಹೊಡೆದ ಪರಿಣಾಮ ಐವರು ಮೃತಪಟ್ಟಿರುವ ಘಟನೆ ಶನಿವಾರ ಬೆಳಗ್ಗೆ ಗುರ್ ಗಾಂವ್ ನ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ನಡೆದಿದೆ.
ಇಂದು ಮುಂಜಾನೆ 4.30ರ ವೇಳೆಗೆ ಝರ್ಸಾ ಚೌಕ್ ಬಳಿಯ ರಾಷ್ಟ್ರೀಯ ಹೆದ್ದಾರಿ 48ರ ನಿರ್ಗಮನ ಪಥದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಅಪಘಾತದಲ್ಲಿ ಬದುಕುಳಿದಿರುವ ಏಕೈಕ ಯುವಕನಿಗೆ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆತನ ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆರು ಮಂದಿಯ ಪೈಕಿ ಮೂವರು ಪುರುಷರು ಹಾಗೂ ಮೂವರು ಮಹಿಳೆಯರಿದ್ದರು.