×
Ad

ಯುಪಿಎಸ್‌ಸಿ ಅಧ್ಯಕ್ಷರಾಗಿ ಮಾಜಿ ರಕ್ಷಣಾ ಕಾರ್ಯದರ್ಶಿ ಅಜಯ್ ಕುಮಾರ್ ನೇಮಕ

Update: 2025-05-14 10:13 IST

ಅಜಯ್ ಕುಮಾರ್ | PTI File Photo

ಹೊಸದಿಲ್ಲಿ: ಮಾಜಿ ರಕ್ಷಣಾ ಕಾರ್ಯದರ್ಶಿ ಅಜಯ್ ಕುಮಾರ್ ಅವರನ್ನು ಯುಪಿಎಸ್‌ಸಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಕೇಂದ್ರ ಸಿಬ್ಬಂದಿ ಸಚಿವಾಲಯ ಈ ಕುರಿತು ಆದೇಶ ಹೊರಡಿಸಿದೆ.

ಎ.29 ರಂದು ಪ್ರೀತಿ ಸುಡಾನ್ ಅವರ ಅಧಿಕಾರಾವಧಿ ಪೂರ್ಣಗೊಂಡ ನಂತರ ಕೇಂದ್ರ ಲೋಕಸೇವಾ ಸೇವಾ ಆಯೋಗದ (ಯುಪಿಎಸ್‌ಸಿ) ಅಧ್ಯಕ್ಷರ ಹುದ್ದೆ ಖಾಲಿಯಿತ್ತು.

1985 ರ ಬ್ಯಾಚ್‌ನ ನಿವೃತ್ತ ಭಾರತೀಯ ಆಡಳಿತ ಸೇವೆ (ಐಎಎಸ್) ಅಧಿಕಾರಿಯಾಗಿರುವ ಅಜಯ್ ಕುಮಾರ್, ಅವರು ಆಗಸ್ಟ್ 23, 2019 ರಿಂದ ಅಕ್ಟೋಬರ್ 31, 2022 ರವರೆಗೆ ರಕ್ಷಣಾ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ. ಯುಪಿಎಸ್‌ಸಿ ಅಧ್ಯಕ್ಷರ ಅಧಿಕಾರವಧಿ ಆರು ವರ್ಷಗಳ ಅವಧಿಗೆ ಅಥವಾ 65 ವರ್ಷದ ವರೆಗೆ ಇರಲಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News