×
Ad

ಸೆಪ್ಟಿಕ್ ಟ್ಯಾಂಕ್‌ಗೆ ಇಳಿದ ನಾಲ್ವರು ಕಾರ್ಮಿಕರು ಮೃತ್ಯು

Update: 2024-07-19 22:04 IST

ಸಾಂದರ್ಭಿಕ ಚಿತ್ರ

ಮೋತಿಹರಿ (ಬಿಹಾರ) : ಸೆಪ್ಟಿಕ್ ಟ್ಯಾಂಕ್‌ಗೆ ಇಳಿದ ನಾಲ್ವರು ಕಾರ್ಮಿಕರು ವಿಷಾನಿಲ ಸೇವನೆಯಿಂದಾಗಿ ಮೃತಪಟ್ಟ ದಾರುಣ ಘಟನೆ ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯಲ್ಲಿ ಗುರುವಾರ ನಡೆದಿದೆ.

ಮೋತಿಹರಿ ಸಮೀಪದ ಧಾಕಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಗ್ರಾಮವೊಂದರಲ್ಲಿ ಈ ದುರಂತ ಸಂಭವಿಸಿದೆ. ಮನೆಯೊಂದರ ಸೆಪ್ಟಿಕ್‌ಟ್ಯಾಂಕ್‌ನೊಳಗೆ ಇಳಿದ ಐವರು ಕಾರ್ಮಿಕರು ವಿಷಾನಿಲ ಸೇವನೆಗೊಳಗಾಗಿ ಪ್ರಜ್ಞೆ ತಪ್ಪಿ ಬಿದ್ದದ್ದರು. ಕೂಡಲೇ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಅವರಲ್ಲಿ ನಾಲ್ವರು ಆಸ್ಪತ್ರೆಗೆ ತರುವಾಗಲೇ ಮೃತಪಟ್ಟಿದ್ದರು.

ವೈದ್ಯರು ಸೂಕ್ತ ಚಿಕಿತ್ಸೆ ನೀಡುವಲ್ಲಿ ವಿಫಲರಾದುದೇ ಕಾರ್ಮಿಕರ ಸಾವಿಗೆಕಾರಣವೆಂದು ಅವರ ಕುಟುಂಬಿಕರು ಆಪಾದಿಸಿದ ಬಳಿಕ ಆಸ್ಪತ್ರೆಯ ಆವರಣದಲ್ಲಿ ಜಮಾಯಿಸಿದ್ದ ನೂರಾರು ಜನರು ಹಿಂಸಾತ್ಮಕ ಪ್ರತಿಭಟನೆಗಿಳಿದರು. ಆಸ್ಪತ್ರೆಯ ಮೇಲೆ ದಾಳಿ ನಡೆಸಿದ ಗುಂಪು, ಆ್ಯಂಬುಲೆನ್ಸ್‌ಗೆ ಬೆಂಕಿ ಹಚ್ಚಿತು ಹಾಗೂ ಅಲ್ಲಿದ್ದ ಪೊಲೀಸ್ ತಂಡವೊಂದರ ಮೇಲೆ ದಾಳಿ ನಡೆಸಿದೆ. ಗಲಭೆಯಲ್ಲಿ ಇಬ್ಬರು ಪೊಲೀಸರಿಗೆ ಗಾಯಗಳಾಗಿವೆ ಎಂದು ಜಿಲ್ಲಾ ಉಪ ಪೊಲೀಸ್ ಅಧೀಕ್ಷಕ (ಡಿಎಸ್‌ಪಿ) ಕಾಂತೇಶ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News