×
Ad

ಭಾರತದಲ್ಲಿನ ಫ್ರೆಂಚ್ ರಾಯಭಾರಿಯ ಮೊಬೈಲ್ ಕಳ್ಳತನ; ನಾಲ್ವರು ಆರೋಪಿಗಳ ಬಂಧನ

Update: 2024-10-30 17:33 IST

PC : indiatoday.in

ಹೊಸದಿಲ್ಲಿ: ಉತ್ತರ ದಿಲ್ಲಿಯ ಚಾಂದಿನಿ ಚೌಕ್ ಪ್ರದೇಶದಲ್ಲಿ ಭಾರತದಲ್ಲಿನ ಫ್ರೆಂಚ್ ರಾಯಭಾರಿ ಥಿಯೆರಿ ಮಾಥೌ ಅವರ ಮೊಬೈಲ್ ಫೋನ್ ಕಳ್ಳತನ ಮಾಡಿರುವ ಆರೋಪದಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

ಫ್ರೆಂಚ್ ರಾಯಭಾರಿ ಥಿಯೆರಿ ಮಾಥೌ ಅವರಿಂದ ಕಳೆದುಹೋದ ಫೋನ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ದಿಲ್ಲಿ ಪೊಲೀಸರು ಬುಧವಾರ ಹೊರಡಿಸಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅ.20ರಂದು ಚಾಂದಿನಿ ಚೌಕ್ ಪ್ರದೇಶದ ಜೈನ್ ಮಂದಿರದ ಬಳಿ ತನ್ನ ಕಿಸೆಯಲ್ಲಿದ್ದ ಮೊಬೈಲ್ ಫೋನ್ ಕಳ್ಳತನವಾಗಿದೆ ಎಂದು ಭಾರತದಲ್ಲಿನ ಫ್ರೆಂಚ್ ರಾಯಭಾರಿ ಥಿಯೆರಿ ಮಾಥೌ ದೂರು ನೀಡಿದ್ದರು.

ದೂರು ದಾಖಲಾದ ಬೆನ್ನಲ್ಲಿ ಪ್ರಕರಣದ ಕುರಿತು ತನಿಖೆಗೆ ಪೊಲೀಸರ ತಂಡವನ್ನು ರಚಿಸಲಾಗಿತ್ತು. ಇದೀಗ ತನಿಖಾ ತಂಡ 20ರಿಂದ 25ರ ಹರೆಯದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಮೊಬೈಲ್ ಫೋನ್ ಕೂಡ ವಶಪಡಿಸಿಕೊಳ್ಳಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News