×
Ad

ಗೋವಾ| ನೈಟ್ ಕ್ಲಬ್‌ನಲ್ಲಿ ಅಗ್ನಿ ಅವಘಡ: ಮೃತರ ಸಂಖ್ಯೆ 25ಕ್ಕೆ ಏರಿಕೆ

ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

Update: 2025-12-07 11:05 IST

Photo| NDTV

ಹೊಸ ದಿಲ್ಲಿ: ಶನಿವಾರ ತಡರಾತ್ರಿ ಗೋವಾದ ನೈಟ್ ಕ್ಲಬ್‌ವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 25 ಮಂದಿ ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ. ಈ ದುರಂತದ ಬಗ್ಗೆ ಆಘಾತ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ, ಮೃತರ ಕುಟುಂಬಸ್ಥರಿಗೆ ತಲಾ ಎರಡು ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಶನಿವಾರ ತಡರಾತ್ರಿ ಗೋವಾ ರಾಜಧಾನಿ ಪಣಜಿಯಿಂದ ಸುಮಾರು 25 ಕಿಮೀ ದೂರ ಇರುವ ಬಿರ್ಚ್ ಬೈ ರೋಮಿಯೊ ಲೇನ್‌ನಲ್ಲಿರುವ ನೈಟ್ ಕ್ಲಬ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.  ಘಟನೆಯಲ್ಲಿ ಕನಿಷ್ಠ 25 ಮಂದಿ ಮೃತಪಟ್ಟು, ಸುಮಾರು 50 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತರ ಪೈಕಿ ಹೆಚ್ಚಿನವರು ನೈಟ್ ಕ್ಲಬ್‌ ಸಿಬ್ಬಂದಿಗಳು ಎನ್ನುವುದು ತಿಳಿದು ಬಂದಿದೆ.  

ಈ ಘಟನೆ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಪ್ರಧಾನಿ ಮೋದಿ, ಮೃತರ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂ.  ಹಾಗೂ ಗಾಯಾಳುಗಳಿಗೆ ತಲಾ 50,000ರೂ. ಪರಿಹಾರ ನೀಡುವುದಾಗಿ ಹೇಳಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News