×
Ad

ಗೋವಾ ನೈಟ್ ಕ್ಲಬ್‌ನಲ್ಲಿ ಅಗ್ನಿ ಅವಘಡ: ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ

ಕ್ಲಬ್‌ ಮಾಲಕ, ಪ್ರಧಾನ ವ್ಯವಸ್ಥಾಪಕನ ವಿರುದ್ಧ ಎಫ್ಐಆರ್ ದಾಖಲು

Update: 2025-12-07 12:01 IST

Photo| PTI

ಪಣಜಿ: 25 ಜನರ ಪ್ರಾಣಹಾನಿಗೆ ಕಾರಣವಾದ ಪಣಜಿ ನೈಟ್ ಕ್ಲಬ್ ಅಗ್ನಿ ದುರಂತದ ಕುರಿತು ಮ್ಯಾಜಿಸ್ಟ್ರೇಟ್ ತನಿಖೆಗೆ  ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಆದೇಶಿಸಿದ್ದಾರೆ.

ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ನೈಟ್ ಕ್ಲಬ್ ಮಾಲಕ ಹಾಗೂ ಪ್ರಧಾನ ವ್ಯವಸ್ಥಾಪಕನ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದ್ದು, ಅವರಿಬ್ಬರನ್ನು ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ. 

ಬಿರ್ಚ್ ಬೈ ರೋಮಿಯೊ ಲೇನ್‌ನಲ್ಲಿರುವ ನೈಟ್ ಕ್ಲಬ್‌ನಲ್ಲಿ ಶನಿವಾರ ತಡರಾತ್ರಿ ಅಗ್ನಿ ಅವಘಡ ಸಂಭವಿಸಿತ್ತು. ಈ ನೈಟ್‌ ಕ್ಲಬ್‌ ರಾಜ್ಯ ರಾಜಧಾನಿ ಪಣಜಿಯಿಂದ ಸುಮಾರು 25 ಕಿಮೀ ದೂರವಿರುವ ಅಪೂರ್ವ ಗ್ರಾಮದಲ್ಲಿದೆ. ಕಳೆದ ವರ್ಷವಷ್ಟೇ ಈ ನೈಟ್ ಕ್ಲಬ್ ಪ್ರಾರಂಭಗೊಂಡಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News