×
Ad

ನೈಟ್ ಕ್ಲಬ್‌‌ನಲ್ಲಿ ಪಟಾಕಿ ಸಿಡಿಸಿದ್ದರಿಂದ ಬೆಂಕಿ ಅವಘಡ: ಗೋವಾ ಸಿಎಂ ಪ್ರಮೋದ್ ಸಾವಂತ್

ಸೀಮಿತ ನಿರ್ಗಮನ ದ್ವಾರಗಳಿಂದಾಗಿ ಸಾವು-ನೋವುಗಳ ಸಂಖ್ಯೆಯಲ್ಲಿ ಏರಿಕೆ

Update: 2025-12-07 19:45 IST

Photo | PTI

ಪಣಜಿ: ಬಿರ್ಚ್ ಬೈ ರೋಮಿಯೊ ಲೇನ್ ನೈಟ್ ಕ್ಲಬ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡಕ್ಕೆ ಕ್ಲಬ್ ಒಳಗೆ ಪಟಾಕಿ ಸಿಡಿಸಿದ್ದು ಕಾರಣ ಎಂದು ರವಿವಾರ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಿಳಿಸಿದ್ದಾರೆ. ಇದರೊಂದಿಗೆ ಸೀಮಿತ ನಿರ್ಗಮನ ದ್ವಾರಗಳಿದ್ದುದರಿಂದ ಸಾವು-ನೋವುಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ ಎಂದೂ ಅವರು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಮೋದ್ ಸಾವಂತ್, ನೈಟ್ ಕ್ಲಬ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡಕ್ಕೆ ಸಿಲಿಂಡರ್ ಸ್ಫೋಟ ಕಾರಣ ಎಂಬ ಆರೋಪಗಳನ್ನು ಅಲ್ಲಗಳೆದಿದ್ದಾರೆ. ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು, ಬೆಂಕಿಯ ಜ್ವಾಲೆಗಳು ವ್ಯಾಪಿಸಿದ್ದರಿಂದ ಈ ಬೆಂಕಿ ಅವಘಡ ಸಂಭವಿಸಿದೆ ಎಂದು ಈ ಮುನ್ನ ಶಂಕಿಸಲಾಗಿತ್ತು.

ಈ ಬೆಂಕಿ ಅವಘಡದ ಕಾರಣಕ್ಕೆ ವಿಪಕ್ಷಗಳಿಂದ ತೀವ್ರ ಟೀಕೆಗೆ ಗುರಿಯಾಗಿರುವ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಈ ಘಟನೆಯ ಕುರಿತು ತನಿಖೆ ನಡೆಸಲು ಸತ್ಯಶೋಧನಾ ಸಮಿತಿಯನ್ನು ರಚಿಸಲಾಗುವುದು ಹಾಗೂ ಈ ಕುರಿತ ವಿಸ್ತೃತ ವರದಿಯನ್ನು ಒಂದು ವಾರದೊಳಗೆ ಸಲ್ಲಿಸುವಂತೆ ಸಮಿತಿಗೆ ಸೂಚಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ಘಟನೆಯಲ್ಲಿ ಮೃತಪಟ್ಟ ಕುಟುಂಬಗಳ ಸದಸ್ಯರಿಗೆ ತಲಾ 5 ಲಕ್ಷ ರೂ. ಹಣಕಾಸು ನೆರವು ವಿತರಿಸಲಾಗುವುದು ಎಂದು ಅವರು ಇದೇ ವೇಳೆ ಪ್ರಕಟಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News