×
Ad

ಮತ್ತೆ ಕುಸಿದ ಚಿನ್ನ- ಬೆಳ್ಳಿ ದರ; ಇಂದಿನ ದರವೆಷ್ಟು?

Update: 2026-03-09 13:50 IST

ಸಾಂದರ್ಭಿಕ ಚಿತ್ರ (AI)

ಪ್ರಬಲವಾಗಿರುವ ಅಮೆರಿಕನ್ ಡಾಲರ್ ಕಾರಣದಿಂದ ಲೋಹಗಳ ಬೇಡಿಕೆ ಕಡಿಮೆಯಾಗಿದೆ.

ಫೆಬ್ರವರಿಯಲ್ಲಿ 15000 ದಿಂದ 16000 ನಡುವೆ ಸ್ಥಿರವಾಗಿದ್ದ ಚಿನ್ನದ ಬೆಲೆ ಮಾರ್ಚ್ ಆರಂಭದಲ್ಲಿ ಏರಿಕೆಯಾಗಿ 17 ಸಾವಿರ ದಾಟಿತ್ತು. ಆದರೆ ನಂತರ ಕಳೆದ ಸೋಮವಾರದಿಂದ ಚಿನ್ನದ ಬೆಲೆ ಕುಸಿತದ ಹಾದಿಯಲ್ಲಿತ್ತು. ಸೋಮವಾರ ದಿಢೀರ್ ಕುಸಿತ ಕಂಡ ಚಿನ್ನದ ಬೆಲೆ ಗ್ರಾಂಗೆ 16,980 ರೂ.ಗೆ ಬಂದು ನಿಂತಿತ್ತು. ಮಂಗಳವಾರ ಮತ್ತೆ ತುಸು ಕುಸಿದಿದೆ. ಬುಧವಾರ ತೀವ್ರವಾಗಿ ಕುಸಿದ ನಂತರ ಗುರುವಾರ ಮತ್ತು ಶುಕ್ರವಾರವೂ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬಂದಿದೆ. ಆದರೆ ವಾರಾಂತ್ಯದಲ್ಲಿ ಚಿನ್ನದ ಬೆಲೆಯಲ್ಲಿ ಹಠಾತ್ ಏರಿಕೆ ಕಂಡುಬಂದಿತ್ತು. ಇದೀಗ ಸೋಮವಾರ ಮತ್ತೆ ಕುಸಿದ ಚಿನ್ನದ ಬೆಲೆ 16 ಸಾವಿರದ ಮಿತಿಯೊಳಗಿದೆ.

ಚಿನ್ನ-ಬೆಳ್ಳಿ ಬೆಲೆ ಕುಸಿತಕ್ಕೆ ಕಾರಣವೇನು?

ಅಮೆರಿಕ ಮತ್ತು ಇಸ್ರೇಲ್ ಜೊತೆಗೂಡಿ ಇರಾನ್ ಮೇಲೆ ದಾಳಿ ಮಾಡಿರುವುದು, ಜಾಗತಿಕ ಭೌಗೋಳಿಕ ರಾಜಕೀಯದ ಉದ್ವಿಗ್ನತೆ ಮತ್ತು ಮಧ್ಯಪ್ರಾಚ್ಯದಲ್ಲಿ ಸಂಘರ್ಷದ ವಾತಾವರಣದ ನಡುವೆಯೂ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಕುಸಿದಿವೆ. ಪ್ರಸ್ತುತ ಮಾರುಕಟ್ಟೆಯ ಗಮನವು ಅಮೆರಿಕದ ಕೇಂದ್ರೀಯ ಬ್ಯಾಂಕ್ ಫೆಡರಲ್ ರಿಸರ್ವ್ ಕೈಗೊಂಡ ನೀತಿ ನಿರೂಪಣೆಗೆ ಸಂಬಂಧಿಸಿದ ನಿರ್ಧಾರಗಳ ಕಡೆಗೆ ಹೋಗಿದೆ. ಅಮೆರಿಕನ್ ಡಾಲರ್ ಬೆಲೆಯು ಉತ್ತಮ ಸ್ಥಿತಿಗೆ ತಲುಪಿದೆ. ಹೀಗಾಗಿ ವಿದೇಶಿ ಖರೀದಿದಾರರಿಗೆ ಚಿನ್ನ-ಬೆಳ್ಳಿ ದುಬಾರಿಯಾಗಿಸಿದೆ. ಪ್ರಬಲವಾಗಿರುವ ಅಮೆರಿಕನ್ ಡಾಲರ್ ಕಾರಣದಿಂದ ಲೋಹಗಳ ಬೇಡಿಕೆ ಕಡಿಮೆಯಾಗಿದೆ.

ಇಂದಿನ ಚಿನ್ನದ ದರ ಹೇಗಿದೆ?

ಮಾರ್ಚ್ 09ರಂದು ಸೋಮವಾರ ಬೆಂಗಳೂರಿನ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ ಶನಿವಾರ ಸಂಜೆಯ ಬೆಲೆಗೆ ಹೋಲಿಸಿದರೆ ಪ್ರತಿ ಗ್ರಾಂಗೆ 196 ರೂ. ಕುಸಿತ ಕಂಡು ಹತ್ತು ಗ್ರಾಂ ಬೆಲೆ 1,61,680 ರೂ. ಗೆ ಬಂದು ನಿಂತಿದೆ. ಆಭರಣ ಚಿನ್ನವಾದ 22 ಕ್ಯಾರೆಟ್ ಬೆಲೆಯು ಗ್ರಾಂಗೆ 180 ರೂ. ಇಳಿದು ಹತ್ತು ಗ್ರಾಂಗೆ 1,48,200 ರೂ. ಗೆ ತಲುಪಿದೆ. 18 ಕ್ಯಾರೆಟ್ ಚಿನ್ನವು ಪ್ರತಿ ಗ್ರಾಂಗೆ 147 ರೂ. ಇಳಿಕೆಯಾಗಿ ಹತ್ತು ಗ್ರಾಂಗೆ 1,21,260 ರೂ. ಗೆ ತಲುಪಿದೆ.

ಮಂಗಳೂರಿನಲ್ಲಿ ಚಿನ್ನದ ದರವೆಷ್ಟಿದೆ?

ಮಾರ್ಚ್ 09ರಂದು ಸೋಮವಾರ ಬೆಳಗಿನ 11 ಗಂಟೆಯ ವಹಿವಾಟಿನಲ್ಲಿ ಮಂಗಳೂರಿನಲ್ಲಿ ಚಿನ್ನದ ಬೆಲೆ ಮತ್ತೆ ಸ್ವಲ್ಪ ಕುಸಿತ ಕಂಡಿದೆ. ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ದರ 16,168 (-196) ರೂ. ನಷ್ಟಿದೆ. ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ದರ 14,820 (-180) ರೂ. ಮತ್ತು ಒಂದು ಗ್ರಾಂ 18 ಕ್ಯಾರೆಟ್ ಚಿನ್ನದ ದರ 12,126 (-147) ರೂ. ಬೆಲೆಗೆ ತಲುಪಿದೆ.

ಮತ್ತೆ ಕುಸಿದ ಬೆಳ್ಳಿ ದರ

ಫೆಬ್ರವರಿ ಆರಂಭದಿಂದಲೇ ಸತತ ಕುಸಿತ ಕಂಡಿದ್ದ ಬೆಳ್ಳಿ ಫೆಬ್ರವರಿ ಮಧ್ಯಭಾಗದಲ್ಲಿ ಏರು ಹಾದಿಯಲ್ಲಿತ್ತು. ಕಳೆದ ವಾರದ ಆರಂಭದಲ್ಲಿ ಸೋಮವಾರ ಬರೋಬ್ಬರಿ ಗ್ರಾಂಗೆ 35 ರೂ. ಏರಿಕೆಯಾಗಿ ಒಂದು ಕೆಜಿ ಬೆಳ್ಳಿ ಬೆಲೆಯು 3,30,000 ರೂ. ಗೆ ತಲುಪಿತ್ತು.

ಆದರೆ ಕಳೆದ ಮಂಗಳವಾರದಿಂದ ಬೆಳ್ಳಿಯ ಬೆಲೆ ಕುಸಿತದ ಹಾದಿಯಲ್ಲಿದೆ. ಮಾರ್ಚ್ 02ರಂದು ಬೆಳ್ಳಿಯ ಬೆಲೆಯಲ್ಲಿ ಮತ್ತೆ ಕುಸಿತ ಕಂಡುಬಂದಿದೆ. ಗ್ರಾಂಗೆ 20 ರೂ. ಕುಸಿತ ಕಂಡು ಒಂದು ಕೆಜಿ ಬೆಳ್ಳಿ ಬೆಲೆಯು 2,95,000 ರೂ. ಗೆ ಬಂದು ನಿಂತಿತ್ತು. ಬುಧವಾರ ಮತ್ತೆ ಪ್ರತಿ ಗ್ರಾಂಗೆ 10 ರೂ. ಕುಸಿದ ಬೆಳ್ಳಿಯ ಬೆಲೆ ಪ್ರತಿ ಕೆಜಿಗೆ 2,85,000 ರೂ. ಗೆ ಬಂದು ನಿಂತಿದೆ. ನಂತರ ಗುರುವಾರ, ಶುಕ್ರವಾರ ಮತ್ತು ಶನಿವಾರ ಇದೇ ಬೆಲೆಗೆ ಸ್ಥಿರವಾಗಿ ನಿಂತಿದೆ. ಇದೀಗ ಸೋಮವಾರ ಮತ್ತೆ ಪ್ರತಿ ಗ್ರಾಂಗೆ 5 ರೂ. ಕುಸಿದ ಬೆಳ್ಳಿ ಪ್ರತಿ ಕೆಜಿಗೆ 2,80,000 ರೂ. ಗೆ ಬಂದು ನಿಂತಿದೆ.

ವಿವಿಧ ನಗರಗಳಲ್ಲಿ 1 ಗ್ರಾಮ್ ಚಿನ್ನದ ದರ (ಬೆಳಗಿನ ವಹಿವಾಟು) ಹೇಗಿದೆ?

ದಿಲ್ಲಿ: 24 ಕ್ಯಾರೆಟ್ ಚಿನ್ನದ ದರ 16,183 (-197) ರೂ., 22 ಕ್ಯಾರೆಟ್ ಚಿನ್ನದ ದರ 14,835 (-180) ರೂ.

ಮುಂಬೈ: 24 ಕ್ಯಾರೆಟ್ ಚಿನ್ನದ ದರ 16,168 (-196) ರೂ., 22 ಕ್ಯಾರೆಟ್ ಚಿನ್ನದ ದರ 14,820 (-180) ರೂ.

ಅಹಮದಾಬಾದ್: 24 ಕ್ಯಾರೆಟ್ ಚಿನ್ನದ ದರ 16,173 (-197) ರೂ., 22 ಕ್ಯಾರೆಟ್ ಚಿನ್ನದ ದರ 14,825 (-180) ರೂ.

ಚೆನ್ನೈ: 24 ಕ್ಯಾರೆಟ್ ಚಿನ್ನದ ದರ 16,309 (-109) ರೂ., 22 ಕ್ಯಾರೆಟ್ ಚಿನ್ನದ ದರ 14,950 (-100) ರೂ.

ಕೋಲ್ಕತ್ತಾ: 24 ಕ್ಯಾರೆಟ್ ಚಿನ್ನದ ದರ 16,363 (-1) ರೂ., 22 ಕ್ಯಾರೆಟ್ ಚಿನ್ನದ ದರ 14,820 (-180) ರೂ.

ಹೈದರಾಬಾದ್: 24 ಕ್ಯಾರೆಟ್ ಚಿನ್ನದ ದರ 16,168 (-196) ರೂ., 22 ಕ್ಯಾರೆಟ್ ಚಿನ್ನದ ದರ 14,820 (-180) ರೂ.

ಜೈಪುರ: 24 ಕ್ಯಾರೆಟ್ ಚಿನ್ನದ ದರ 16,183 (-197) ರೂ., 22 ಕ್ಯಾರೆಟ್ ಚಿನ್ನದ ದರ 14,835 (-180) ರೂ.

ಚಂಡೀಗಢ: 24 ಕ್ಯಾರೆಟ್ ಚಿನ್ನದ ದರ 16,183 (-197) ರೂ., 22 ಕ್ಯಾರೆಟ್ ಚಿನ್ನದ ದರ 14,835 (-180) ರೂ.

ಲಕ್ನೋ: 24 ಕ್ಯಾರೆಟ್ ಚಿನ್ನದ ದರ 16,183 (-197) ರೂ., 22 ಕ್ಯಾರೆಟ್ ಚಿನ್ನದ ದರ 14,835 (-180) ರೂ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News