×
Ad

ಮತ್ತಷ್ಟು ಕುಸಿದ ಚಿನ್ನದ ದರ, ತಟಸ್ಥ ಬೆಳ್ಳಿ

Update: 2026-03-06 12:42 IST

ಸಾಂದರ್ಭಿಕ ಚಿತ್ರ | Photo Credit : freepik

ಅಮೆರಿಕನ್ ಡಾಲರ್ ಮೌಲ್ಯ ಪ್ರಬಲವಾಗಿರುವ ಕಾರಣದಿಂದ ಹೂಡಿಕೆದಾರರಿಗೆ ಚಿನ್ನದ ಮೇಲೆ ಹೂಡಿಕೆ ದುಬಾರಿಯಾಗಿದೆ.

ಫೆಬ್ರವರಿ ತಿಂಗಳಲ್ಲಿ ಚಿನ್ನದ ದರ 15 ಸಾವಿರದಿಂದ 16 ಸಾವಿರದ ನಡುವೆ ಸ್ಥಿರವಾಗಿತ್ತು. ನಂತರ, ಕಳೆದ ಶನಿವಾರ ಗ್ರಾಂಗೆ 300 ರೂ. ಮೀರಿ ಏರಿದ ನಂತರ ರವಿವಾರವೂ ಗ್ರಾಂಗೆ 437 ರೂ. ಏರಿಕೆಯಾಗಿ ಚಿನ್ನದ ಬೆಲೆ 17 ಸಾವಿರದ ಗಡಿ ದಾಟಿತ್ತು. ಆದರೆ, ಸೋಮವಾರದಿಂದ ಚಿನ್ನದ ಬೆಲೆ ಕುಸಿತದ ಹಾದಿಯಲ್ಲಿದೆ. ಸೋಮವಾರ ದಿಢೀರ್ ಕುಸಿತ ಕಂಡ ಚಿನ್ನದ ಬೆಲೆ ಗ್ರಾಂಗೆ 16,980 ರೂ.ಗೆ ಬಂದು ನಿಂತಿತ್ತು, ನಂತರ ಸಂಜೆ ವೇಳೆ ತುಸು ಚೇತರಿಸಿಕೊಂಡ ಬೆಲೆ ಮಂಗಳವಾರ ಮತ್ತೆ ತುಸು ಕುಸಿದಿದೆ. ಬುಧವಾರ ಚಿನ್ನ-ಬೆಳ್ಳಿಯ ಬೆಲೆ ತೀವ್ರವಾಗಿ ಕುಸಿದ ನಂತರ ಗುರುವಾರವೂ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬಂದಿದೆ. ಇದೀಗ ಶುಕ್ರವಾರವೂ ಚಿನ್ನದ ಬೆಲೆಯಲ್ಲಿ ಅಲ್ಪಮಟ್ಟಿಗೆ ಕುಸಿತ ಕಂಡುಬಂದಿದೆ.

ಚಿನ್ನ-ಬೆಳ್ಳಿ ಬೆಲೆ ಕುಸಿತಕ್ಕೆ ಕಾರಣವೇನು?

ಪ್ರಬಲವಾಗಿರುವ ಅಮೆರಿಕನ್ ಡಾಲರ್ ಕಾರಣದಿಂದ ಲೋಹಗಳ ಬೇಡಿಕೆ ಕಡಿಮೆಯಾಗಿದೆ. ಮಾರ್ಚ್ 18ರಂದು ನಡೆಯುವ ಸಭೆಯಲ್ಲಿ ಅಮೆರಿಕದ ಕೇಂದ್ರೀಯ ಬ್ಯಾಂಕ್ ಫೆಡರಲ್ ರಿಸರ್ವ್ ದೀರ್ಘ ಸಮಯದವರೆಗೆ ಬಡ್ಡಿದರವನ್ನು ಸ್ಥಿರವಾಗಿಡಲಿದೆ ಎಂದು ಹೂಡಿಕೆದಾರರು ನಿರೀಕ್ಷಿಸುತ್ತಿದ್ದಾರೆ. ಹೀಗಾಗಿ ಪ್ರಸ್ತುತ ಚಿನ್ನದ ಹೂಡಿಕೆಯಿಂದ ದೂರವೇ ಉಳಿದಿದ್ದಾರೆ.

ಇಂದಿನ ಚಿನ್ನದ ದರ ಹೇಗಿದೆ?

ಮಾರ್ಚ್ 06ರಂದು ಶುಕ್ರವಾರ ಬೆಂಗಳೂರಿನ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ ಗುರುವಾರ ಸಂಜೆಯ ಬೆಲೆಗೆ ಹೋಲಿಸಿದರೆ ಪ್ರತಿ ಗ್ರಾಂಗೆ 77 ರೂ. ಕುಸಿತ ಕಂಡು ಹತ್ತು ಗ್ರಾಂ ಬೆಲೆ 1,62,110 ರೂ. ಗೆ ಬಂದು ನಿಂತಿದೆ. ಆಭರಣ ಚಿನ್ನವಾದ 22 ಕ್ಯಾರೆಟ್ ಬೆಲೆಯು ಗ್ರಾಂಗೆ 70 ರೂ. ಇಳಿದು ಹತ್ತು ಗ್ರಾಂಗೆ 1,48,600 ರೂ. ಗೆ ತಲುಪಿದೆ. 18 ಕ್ಯಾರೆಟ್ ಚಿನ್ನವು ಪ್ರತಿ ಗ್ರಾಂಗೆ 58 ರೂ. ಇಳಿಕೆಯಾಗಿ ಹತ್ತು ಗ್ರಾಂಗೆ 1,21,580 ರೂ. ಗೆ ತಲುಪಿದೆ.

ಮಂಗಳೂರಿನಲ್ಲಿ ಚಿನ್ನದ ದರವೆಷ್ಟಿದೆ?

ಮಾರ್ಚ್ 06ರಂದು ಶುಕ್ರವಾರ ಬೆಳಗಿನ 11 ಗಂಟೆಯ ವಹಿವಾಟಿನಲ್ಲಿ ಮಂಗಳೂರಿನಲ್ಲಿ ಚಿನ್ನದ ಬೆಲೆ ಮತ್ತಷ್ಟು ಕುಸಿತ ಕಂಡಿದೆ. ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ದರ 16,211 (-77) ರೂ. ನಷ್ಟಿದೆ. ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ದರ 14,860 (-70) ರೂ. ಮತ್ತು ಒಂದು ಗ್ರಾಂ 18 ಕ್ಯಾರೆಟ್ ಚಿನ್ನದ ದರ 12,158 (-58) ರೂ. ಬೆಲೆಗೆ ತಲುಪಿದೆ.

ಸ್ಥಿರವಾದ ಬೆಳ್ಳಿ ದರ

ಫೆಬ್ರವರಿ ಆರಂಭದಿಂದಲೇ ಸತತ ಕುಸಿತ ಕಂಡಿದ್ದ ಬೆಳ್ಳಿ ಫೆಬ್ರವರಿ ಮಧ್ಯಭಾಗದಲ್ಲಿ ಏರು ಹಾದಿಯಲ್ಲಿತ್ತು. ಕಳೆದ ವಾರದಲ್ಲಿ ಬುಧವಾರ, ಗುರುವಾರ ಮತ್ತು ಶುಕ್ರವಾರ ಸ್ಥಿರವಾಗಿದ್ದ ಬೆಳ್ಳಿಯ ಬೆಲೆ, ಶನಿವಾರ ಗ್ರಾಂಗೆ ರೂ 10 ಏರಿಕೆಯಾಗಿ ಒಂದು ಕೆಜಿ ಬೆಳ್ಳಿ ಬೆಲೆ 2,95,000 ರೂ. ಗೆ ಬಂದು ನಿಂತಿತ್ತು. ಮಾರ್ಚ್ 1ರಂದು ರವಿವಾರವೂ ಇದೇ ಬೆಲೆಯಲ್ಲಿ ಸ್ಥಿರವಾಗಿ ನಿಂತಿತ್ತು. ಆದರೆ ಈ ವಾರದ ಆರಂಭದಲ್ಲಿ ಸೋಮವಾರ ಬರೋಬ್ಬರಿ ಗ್ರಾಂಗೆ 35 ರೂ. ಏರಿಕೆಯಾಗಿ ಒಂದು ಕೆಜಿ ಬೆಳ್ಳಿ ಬೆಲೆಯು 3,30,000 ರೂ. ಗೆ ತಲುಪಿತ್ತು.

ಮಂಗಳವಾರದಿಂದ ಬೆಳ್ಳಿಯ ಬೆಲೆ ಕುಸಿತದ ಹಾದಿಯಲ್ಲಿದೆ. ಮಾರ್ಚ್ 02ರಂದು ಗ್ರಾಂಗೆ 20 ರೂ. ಕುಸಿತ ಕಂಡು ಒಂದು ಕೆಜಿ ಬೆಳ್ಳಿ ಬೆಲೆಯು 2,95,000 ರೂ. ಗೆ ಬಂದು ನಿಂತಿತ್ತು. ಬುಧವಾರ ಮತ್ತೆ ಪ್ರತಿ ಗ್ರಾಂಗೆ 10 ರೂ. ಕುಸಿದ ಬೆಳ್ಳಿಯ ಬೆಲೆ ಪ್ರತಿ ಕೆಜಿಗೆ 2,85,000 ರೂ. ಗೆ ಬಂದು ನಿಂತಿದೆ. ಇದೀಗ ಗುರುವಾರ ಮತ್ತು ಶುಕ್ರವಾರ ಬೆಳ್ಳಿ ಇದೇ ಬೆಲೆಗೆ ಸ್ಥಿರವಾಗಿ ನಿಂತಿದೆ.

ವಿವಿಧ ನಗರಗಳಲ್ಲಿ 1 ಗ್ರಾಮ್ ಚಿನ್ನದ ದರ (ಬೆಳಗಿನ ವಹಿವಾಟು) ಹೇಗಿದೆ?

ದಿಲ್ಲಿ: 24 ಕ್ಯಾರೆಟ್ ಚಿನ್ನದ ದರ 16,226 (-77) ರೂ., 22 ಕ್ಯಾರೆಟ್ ಚಿನ್ನದ ದರ 14,875 (-70) ರೂ.

ಮುಂಬೈ: 24 ಕ್ಯಾರೆಟ್ ಚಿನ್ನದ ದರ 16,211 (-77) ರೂ., 22 ಕ್ಯಾರೆಟ್ ಚಿನ್ನದ ದರ 14,860 (-70) ರೂ.

ಅಹಮದಾಬಾದ್: 24 ಕ್ಯಾರೆಟ್ ಚಿನ್ನದ ದರ 16,216 (-77) ರೂ., 22 ಕ್ಯಾರೆಟ್ ಚಿನ್ನದ ದರ 14,865 (-70) ರೂ.

ಚೆನ್ನೈ: 24 ಕ್ಯಾರೆಟ್ ಚಿನ್ನದ ದರ 16,494 (-1) ರೂ., 22 ಕ್ಯಾರೆಟ್ ಚಿನ್ನದ ದರ 15,119 (-1) ರೂ.

ಕೋಲ್ಕತ್ತಾ: 24 ಕ್ಯಾರೆಟ್ ಚಿನ್ನದ ದರ 16,211 (-77) ರೂ., 22 ಕ್ಯಾರೆಟ್ ಚಿನ್ನದ ದರ 14,860 (-70) ರೂ.

ಹೈದರಾಬಾದ್: 24 ಕ್ಯಾರೆಟ್ ಚಿನ್ನದ ದರ 16,211 (-77) ರೂ., 22 ಕ್ಯಾರೆಟ್ ಚಿನ್ನದ ದರ 14,860 (-70) ರೂ.

ಜೈಪುರ: 24 ಕ್ಯಾರೆಟ್ ಚಿನ್ನದ ದರ 16,226 (-77) ರೂ., 22 ಕ್ಯಾರೆಟ್ ಚಿನ್ನದ ದರ 14,875 (-70) ರೂ.

ಚಂಡೀಗಢ: 24 ಕ್ಯಾರೆಟ್ ಚಿನ್ನದ ದರ 16,226 (-77) ರೂ., 22 ಕ್ಯಾರೆಟ್ ಚಿನ್ನದ ದರ 14,875 (-70) ರೂ.

ಲಕ್ನೋ: 24 ಕ್ಯಾರೆಟ್ ಚಿನ್ನದ ದರ 16,226 (-77) ರೂ., 22 ಕ್ಯಾರೆಟ್ ಚಿನ್ನದ ದರ 14,875 (-70) ರೂ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News