ಗಗನಕ್ಕೇರಿದ ಚಿನ್ನ, ಬೆಳ್ಳಿ ಬೆಲೆಯಲ್ಲೂ ಏರಿಕೆ ; ಮಂಗಳೂರಿನಲ್ಲಿ ಚಿನ್ನದ ದರವೆಷ್ಟಿದೆ?
ಸಾಂದರ್ಭಿಕ ಚಿತ್ರ | Photo Credit : freepik
ಅಮೆರಿಕದ ಫೆಡರಲ್ ರಿಸರ್ವ್ ಬಡ್ಡಿದರ ಕಡಿತಗೊಳಿಸಿದ ಬೆನ್ನಲ್ಲೇ ದೇಶೀ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಗೆ ಗಣನೀಯ ಏರಿಕೆ ಕಂಡು ಮಾರುಕಟ್ಟೆಯಲ್ಲಿ ಸಂಚಲನ ಮೂಡಿದೆ.
ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗಗನಕ್ಕೇರಿವೆ. ಭಾರತದಲ್ಲಿ ಮದುವೆ- ಸಮಾರಂಭಗಳಲ್ಲಿ ಚಿನ್ನದ ಉಡುಗೊರೆ ನೀಡುವುದು ಸಾಮಾನ್ಯವಾಗಿ ಸಂಪ್ರದಾಯ. ಆದರೆ ಇದೀಗ ನಿರಂತರವಾಗಿ ಏರುತ್ತಿರುವ ಬೆಲೆಯು ಆಭರಣಪ್ರಿಯರಿಗೆ ಆಘಾತ ತಂದಿದೆ. ಶುಕ್ರವಾರ ಚಿನ್ನದ ಬೆಲೆ 1 ಲಕ್ಷ 30 ಸಾವಿರ ರೂಪಾಯಿ ಗಡಿ ದಾಟಿದೆ. ಬೆಳ್ಳಿಯ ಬೆಲೆ ಕೆಜಿಗೆ 2,01,100 ರೂಪಾಯಿ ಆಗಿದೆ.
ಫೆಡ್ ದರ ಕಡಿತದ ನಿರ್ಧಾರದ ನಂತರ ಜಾಗತಿಕ ಮಾರುಕಟ್ಟೆಯಲ್ಲಿ ಡಾಲರ್ ದುರ್ಬಲಗೊಂಡಿರುವುದು ಮತ್ತು ಹೂಡಿಕೆದಾರರು ಸುರಕ್ಷಿತ ಹೂಡಿಕೆಯತ್ತ ಮುಖ ಮಾಡಿರುವುದು ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ.
ಮಂಗಳೂರಿನಲ್ಲಿ ಚಿನ್ನದ ದರವೆಷ್ಟು?
ಶುಕ್ರವಾರ ಡಿಸೆಂಬರ್ 12ರಂದು ಮಂಗಳೂರಿನಲ್ಲಿ ಬಂಗಾರದ ಬೆಲೆ ಮತ್ತೆ ಏರಿಕೆ ಕಂಡಿದೆ. ಬೆಳಗಿನ ವಹಿವಾಟಿನಲ್ಲಿ ಒಂದು ಗ್ರಾಂ 24 ಕ್ಯಾರೆಟ್ ಚಿನ್ನಕ್ಕೆ ರೂ. 13,266 (+191), 22 ಕ್ಯಾರೆಟ್ ಚಿನ್ನಕ್ಕೆ ರೂ. 12,160 (+175) ಮತ್ತು 18 ಕ್ಯಾರೆಟ್ ಚಿನ್ನಕ್ಕೆ ರೂ. 9,949 (+143) ಬೆಲೆಗೆ ಏರಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 10 ಗ್ರಾಂ ಚಿನ್ನದ ಬೆಲೆ ರೂ. 1,21,600ಕ್ಕೆ ಏರಿದೆ ಮತ್ತು 100 ಗ್ರಾಂ ಬೆಳ್ಳಿಯ ಬೆಲೆ ರೂ. 20,400ರ ಮಟ್ಟದಲ್ಲಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ. 1,30,760 ಗಳಾಗಿದ್ದು, 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ. 1,19,860 ಗಳಲ್ಲೇ ಮುಂದುವರೆದಿದೆ.
ಪ್ರಮುಖ ನಗರಗಳಲ್ಲಿ ಚಿನ್ನದ ದರ
ದಿಲ್ಲಿಯಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ. 1,30,910 ಆಗಿದ್ದರೆ, 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ. 1,20,100. ಮುಂಬೈನಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ. 1,30,760 ಆಗಿದ್ದರೆ, 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ. 1,19,860. ಹೈದರಾಬಾದ್‌ನಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ. 1,30,760 ಆಗಿದ್ದರೆ, 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.1,19,860 ಆಗಿದೆ.
ಜಾಗತಿಕವಾಗಿ ಚಿನ್ನ ಮತ್ತು ಬೆಳ್ಳಿಗೆ ಬೇಡಿಕೆ ಹೆಚ್ಚಾಗಿರುವುದು ಸೇರಿದಂತೆ ಹಲವು ಅಂಶಗಳಿಂದಾಗಿ ಬೆಲೆ ಏರಿಕೆಯಾಗಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಡುತ್ತಾರೆ. ಜಾಗತಿಕ ಉದ್ವಿಗ್ನತೆ ಮತ್ತು ಆರ್ಥಿಕ ಅನಿಶ್ಚಿತತೆಯ ಬಗ್ಗೆ ಹೂಡಿಕೆದಾರರು ಹೆಚ್ಚು ಗಮನ ಹರಿಸುತ್ತಿದ್ದಾರೆ. ಪರಿಣಾಮ ತಮ್ಮ ಸಂಪತ್ತನ್ನು ಉಳಿಸಿಕೊಳ್ಳಲು ಚಿನ್ನ ಮತ್ತು ಬೆಳ್ಳಿಯಂತಹ ಸುರಕ್ಷಿತ ಹೂಡಿಕೆಗಳತ್ತ ಗಮನ ಹರಿಸುತ್ತಿದ್ದಾರೆ.