ಫೆ.16ರಂದು ಗ್ರಾಮೀಣ ಭಾರತ ಬಂದ್
Update: 2024-02-13 21:48 IST
ಸಾಂದರ್ಭಿಕ ಚಿತ್ರ | Photo: PTI
ಹೊಸದಿಲ್ಲಿ: ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಜಾರಿಗೆ ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಂಯುಕ್ತ ಕಿಸಾನ್ ಮೋರ್ಚಾ ಮಂಗಳವಾರ ಪಾತ್ರಬರೆದಿದೆ. ಪಂಜಾಬ್-ಹರ್ಯಾಣದ ಶಂಭುಗಡಿಯಲ್ಲಿ ರೈತರ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯವನ್ನು ಖಂಡಿಸಿದೆ.
ರೈತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರೀಯ ಕಾರ್ಮಿಕ ಸಂಘಟನೆಗಳು ಫೆ.16ರಂದು ಕರೆ ನೀಡಿರುವ ಗ್ರಾಮೀಣ ಭಾರತ ಬಂದ್ನಲ್ಲಿ ಪಾಲ್ಗೊಳ್ಳುವಂತೆ ಎಲ್ಲಾ ಸಮಾನ ಮನಸ್ಕ ರೈತಸಂಘಟನೆಗಳಿಗೆ ಅದು ಕರೆ ನೀಡಿದೆ.
ಫೆ.16ರಂದು ಗುರುವಾರ ಬೆಳಗ್ಗೆ 6:00 ಗಂಟೆಯಿಂದ ಸಂಜೆ 4:00 ಗಂಟೆಯವರೆಗೆ ಭಾರತ್ ಬಂದ್ ನಡೆಯಲಿದೆ. ಮಧ್ಯಾಹ್ನ 12:00 ರಿಂದ ಸಂಜೆ 4:00ರವರೆಗೆ ದೇಶಾದ್ಯಂತದ ಪ್ರಮುಖ ರಸ್ತೆಗಳಲ್ಲಿ ಚಕ್ಕಾ ಜಾಮ್ (ವಾಹನ ಸಂಚಾರ ತಡೆ) ನಡೆಸಲಾಗುವುದು ಎಂದು ಎಸ್ಕೆಎಂ ತಿಳಿಸಿದೆ.