×
Ad

ಗುಜರಾತ್ | ಠೇವಣಿ ಹಣದಿಂದ ತೆರಿಗೆ ಕಡಿತಗೊಳಿಸಿದ್ದಕ್ಕೆ ಆಕ್ರೋಶಗೊಂಡು ಬ್ಯಾಂಕ್ ಮ್ಯಾನೇಜರ್ ಮೇಲೆ ಹಲ್ಲೆ ನಡೆಸಿದ ಗ್ರಾಹಕ

Update: 2024-12-08 19:49 IST

PC : X/@idesibanda

ಅಹಮದಾಬಾದ್: ಬ್ಯಾಂಕ್ ನಲ್ಲಿಟ್ಟಿದ್ದ ಠೇವಣಿ ಹಣದಿಂದ ತೆರಿಗೆ ಕಡಿತ ಮಾಡಿದ್ದಕ್ಕೆ ಆಕ್ರೋಶಗೊಂಡ ಗುಜರಾತ್ ನ ವ್ಯಕ್ತಿಯೋರ್ವ ಬ್ಯಾಂಕ್ ಮ್ಯಾನೇಜರ್ ಗೆ ಥಳಿಸಿದ್ದು, ಈ ಕುರಿತ ವೀಡಿಯೊ ವೈರಲ್ ಆಗಿದೆ.

ಜೈಮನ್ ರಾವಲ್ ಎಂಬವರು ಅಹಮದಾಬಾದ್‌ ನ ವಸ್ತ್ರಾಪುರದಲ್ಲಿರುವ ಯೂನಿಯನ್ ಬ್ಯಾಂಕ್ ನಲ್ಲಿ ನಗದು ಠೇವಣಿ ಇರಿಸಿದ್ದರು. ಸ್ಥಿರ ಠೇವಣಿ (Fixed Deposit) ಮೇಲಿನ ತೆರಿಗೆ ಕಡಿತದ ಹೆಚ್ಚಳದಿಂದ ಜೈಮನ್ ರಾವಲ್ ಆಕ್ರೋಶಗೊಂಡಿದ್ದು, ಬ್ಯಾಂಕ್ ಮ್ಯಾನೇಜರ್ ವಾಗ್ವಾದ ನಡೆಸಿದ್ದಾರೆ. ಬಳಿಕ ವಾಗ್ವಾದ ತಾರಕಕ್ಕೇರಿ ಜೈಮನ್ ರಾವಲ್ ಬ್ಯಾಂಕ್ ಮ್ಯಾನೇಜರ್ ಗೆ ಹಲ್ಲೆ ನಡೆಸಿದ್ದಾನೆ. ಆ ಬಳಿಕ ಇಬ್ಬರ ನಡುವೆ ಪರಸ್ಪರ ಹೊಡೆದಾಟ ನಡೆದಿದೆ. ಈ ವೇಳೆ ಅಲ್ಲಿದ್ದವರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.

ಈ ಕುರಿತು ವಸ್ತ್ರಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಾಟ್ನಾದ ಗಾಂಧಿ ಮೈದಾನ ಪೊಲೀಸ್ ಠಾಣಾ ವ್ಯಾಪ್ತಿಯ ಕೆನರಾ ಬ್ಯಾಂಕ್ ಶಾಖೆಯಲ್ಲಿ ಇದೇ ರೀತಿಯ ಘಟನೆ ವರದಿಯಾಗಿದೆ. CIBIL ಸ್ಕೋರ್ ಗಾಗಿ ಗ್ರಾಹಕರೊಬ್ಬರು ಮಹಿಳಾ ಬ್ಯಾಂಕ್ ಮ್ಯಾನೇಜರ್‌ ಗೆ ಬೆದರಿಕೆ ಹಾಕಿ, ಮೊಬೈಲ್ ಕಿತ್ತುಕೊಂಡು ನೆಲಕ್ಕೆ ಎಸೆದು ಆಕ್ರೋಶವನ್ನು ವ್ಯಕ್ತಪಡಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News