×
Ad

ಗುಜರಾತ್| ಎರಡು ಗುಂಪುಗಳ ನಡುವೆ ಪರಸ್ಪರ ಕಲ್ಲು ತೂರಾಟ: 42 ಮಂದಿ ಪೊಲೀಸ್‌ ವಶಕ್ಕೆ

Update: 2025-12-30 18:56 IST

Photo| indiatoday/ Screengrab

ಅಹ್ಮದಾಬಾದ್‌: ಗುಜರಾತ್‌ನ ಅಹ್ಮದಾಬಾದ್‌ನ ಗ್ರಾಮವೊಂದರಲ್ಲಿ ಎರಡು ಗುಂಪುಗಳ ನಡುವಿನ ಜಗಳ ವಿಕೋಪಕ್ಕೆ ತಿರುಗಿ ಎರಡೂ ಗುಂಪುಗಳು ಪರಸ್ಪರ ಕಲ್ಲು ತೂರಾಟ ನಡೆಸಿದೆ. ಇದರ ಬೆನ್ನಿಗೇ ಪೊಲೀಸರು 42 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಮಂಗಳವಾರ ಬೆಳಿಗ್ಗೆ ಕಲಾನ ಗ್ರಾಮದಲ್ಲಿ ಘಟನೆ ನಡೆದಿದೆ. ಹಿಂದಿನ ರಾತ್ರಿ ಕ್ಷುಲ್ಲಕ ವಿಷಯದ ಕುರಿತು ಎರಡು ಗುಂಪುಗಳ ನಡುವೆ ಉಂಟಾದ ಭಿನ್ನಾಭಿಪ್ರಾಯದ ಬಳಿಕ ಪ್ರಕ್ಷುಬ್ಧ ಪರಿಸ್ಥಿತಿಗೆ ಕಾರಣವಾಗಿದೆ. ಬೈಕ್ ಚಲಾಯಿಸುತ್ತಿದ್ದ ಒಂದು ಗುಂಪಿನ ಕೆಲ ಸದಸ್ಯರನ್ನು ಮತ್ತೊಂದು ಗುಂಪಿನ ವ್ಯಕ್ತಿಗಳು ತಡೆದು ಪ್ರಶ್ನಿಸಿದ್ದರಿಂದ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರಂಭದಲ್ಲಿ ಭಿನ್ನಾಭಿಪ್ರಾಯ ಬಗೆಹರಿದಂತೆ ಕಂಡು ಬಂದರೂ, ಮರುದಿನ ಬೆಳಿಗ್ಗೆ ಪರಿಸ್ಥಿತಿ ಬಿಗಡಾಯಿಸಿದೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದರಿಂದ, ಅಹ್ಮದಾಬಾದ್‌ ಗ್ರಾಮೀಣ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಪೊಲೀಸ್ ಅಧಿಕಾರಿಗಳನ್ನು ಘಟನಾ ಸ್ಥಳದಲ್ಲಿ ನಿಯೋಜಿಸಲಾಗಿದೆ.

ಈ ಸಂಬಂಧ ಪೊಲೀಸರು ಎರಡೂ ಗುಂಪಿನ ಸದಸ್ಯರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಈವರೆಗೆ ಒಟ್ಟು 42 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News