×
Ad

ಗುಜರಾತ್ |ಶಂಕಿತ ಚಾಂದಿಪುರ ವೈರಸ್ ; ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 20ಕ್ಕೆ ಏರಿಕೆ

Update: 2024-07-19 22:21 IST

PC : NDTV

ಗಾಂಧಿನಗರ : ಗುಜರಾತ್‌ನಲ್ಲಿ ಚಾಂದಿಪುರ ವೈರಸ್ ಸೋಂಕಿನ ಶಂಕಿತ ಪ್ರಕರಣಗಳಲ್ಲಿ ಮೃತಪಟ್ಟವರ ಸಂಖ್ಯೆ ಗುರುವಾರ 20ಕ್ಕೆ ತಲುಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಹ್ಮದಾಬಾದ್‌ನಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿರುವುದು ವರದಿಯಾಗಿದೆ. ಚಾಂದಿಪುರ ವೈರಸ್ ಸೋಂಕಿನ ಲಕ್ಷಣವುಳ್ಳ ಕನಿಷ್ಠ 35 ಮಂದಿ ರಾಜ್ಯಾದ್ಯಂತದ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ.

ಗುಜರಾತ್ ಸರಕಾರ ಪರೀಕ್ಷೆಗೆ ಕಳುಹಿದ್ದ 18 ಮಾದರಿಗಳ ಪೈಕಿ 2ರಲ್ಲಿ ಮಾತ್ರ ಚಾಂದಿಪುರ ವೈರಸ್ ಇರುವುದು ದೃಢಪಟ್ಟಿದೆ ಎಂದು ಪುಣೆಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಯ ಹೆಸರು ಹೇಳಲಿಚ್ಛಿಸದ ಅಧಿಕಾರಿ ತಿಳಿಸಿದ್ದಾರೆ.

ಚಾಂದಿಪುರ ವೈರಸ್ ಸೋಂಕಿನಿಂದ ಕನಿಷ್ಠ 20 ಮಂದಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಶಂಕಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News