×
Ad

ಗುಂಡಿಕ್ಕಿ ಜಿಮ್ ಮಾಲಕನ ಹತ್ಯೆ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

Update: 2024-09-13 15:46 IST

PC : ANI 

ಹೊಸದಿಲ್ಲಿ: ಜಿಮ್ ಮಾಲಕನೊಬ್ಬನಿಗೆ ಗುಂಡಿಟ್ಟು ಹತ್ಯೆಗೈದಿರುವ ಘಟನೆ ದಕ್ಷಿಣ ದಿಲ್ಲಿಯ ಗ್ರೇಟರ್ ಕೈಲಾಶ್ ಪ್ರದೇಶದಲ್ಲಿ ಗುರುವಾರ ರಾತ್ರಿ ನಡೆದಿದ್ದು, ಇದು ಗ್ಯಾಂಗ್ ವಾರ್ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಮೃತ ವ್ಯಕ್ತಿಯನ್ನು ನಾದಿರ್ ಶಾ (35) ಎಂದು ಗುರುತಿಸಲಾಗಿದೆ.

ಗುರುವಾರ ರಾತ್ರಿ ಸಿಆರ್ ಪಾರ್ಕ್ ನಿವಾಸಿಯಾದ ನಾದಿರ್ ಶಾರನ್ನು ಬೈಕ್ ನಲ್ಲಿ ಹಿಂಬಾಲಿಸಿರುವ ಹಂತಕರು, ಅವರ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಗುಂಡಿನ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಗಂಭೀರವಾಗಿ ಗಾಯಗೊಂಡಿದ್ದ ಅವರು ಮಾರ್ಗಮಧ್ಯದಲ್ಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಜಿಮ್ ಮಾಲಕರಾದ ನಾದಿರ್ ಶಾ, ತಮ್ಮ ಜಿಮ್ ಅನ್ನು ಪಾಲುದಾರಿಕೆ ಆಧಾರದಲ್ಲಿ ನಡೆಸುತ್ತಿದ್ದರು ಎಂಬುದು ಪೊಲೀಸರ ತನಿಖೆಯ ಸಂದರ್ಭದಲ್ಲಿ ತಿಳಿದು ಬಂದಿದೆ.

ಘಟನೆಯ ಕುರಿತು ಎಲ್ಲ ಆಯಾಮಗಳಿಂದ ತನಿಖೆ ನಡೆಸುತ್ತಿರುವ ಪೊಲೀಸರು, ಈ ಘಟನೆಗೆ ಗ್ಯಾಂಗ್ ವಾರ್ ಕಾರಣವಿರಬಹುದು ಎಂದೂ ಶಂಕಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News