×
Ad

ಜಿಲ್ಲಾಧಿಕಾರಿಯ ‘ಎಕ್ಸ್’ ಖಾತೆ ಹ್ಯಾಕ್ ಮಾಡಿ ರಾಹುಲ್ ಗಾಂಧಿ ವಿರುದ್ಧ ಪೋಸ್ಟ್ | ವ್ಯಕ್ತಿಯ ಬಂಧನ

Update: 2024-09-15 15:48 IST

PHOTO : X

ಹೊಸದಿಲ್ಲಿ : ಉತ್ತರ ಪ್ರದೇಶದ ಗೌತಮ್ ಬುದ್ಧ ನಗರ ಜಿಲ್ಲಾಧಿಕಾರಿಯವರ ಅಧಿಕೃತ ಎಕ್ಸ್ ಹ್ಯಾಂಡಲ್ ಖಾತೆಯನ್ನು ಹ್ಯಾಕ್ ಮಾಡಿದ ಆರೋಪದ ಮೇಲೆ ನೋಯ್ಡಾ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.

ಹ್ಯಾಕ್‌ ಮಾಡಿದ್ದ ಖಾತೆಯಿಂದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ‘ಪಪ್ಪು’ ಎಂದು ಉಲ್ಲೇಖಿಸಿ ಆಕ್ಷೇಪಾರ್ಹ ಪೋಸ್ಟ್ ಮಾಡಲಾಗಿತ್ತು. ಆರೋಪಿಯನ್ನು 34 ವರ್ಷದ ಸೋಹನ್ ಸಿಂಗ್ ಎಂದು ಗುರುತಿಸಲಾಗಿದೆ. ಆರೋಪಿಯ ಮೊಬೈಲ್ ಫೋನ್ ಪೊಲೀಸರು ವಶಪಡಿಸಿಕೊಂಡಿದ್ದಾರೆ.

“ಗೌತಮ್ ಬುದ್ಧ ನಗರ ಜಿಲ್ಲಾಧಿಕಾರಿಯವರ ಅಧಿಕೃತ ಎಕ್ಸ್ ಖಾತೆಯನ್ನು ಹ್ಯಾಕ್ ಮಾಡಿ, ರಾಜಕೀಯ ಟೀಕೆಗಳನ್ನು ಮಾಡಿದ ಆರೋಪದ ಮೇಲೆ ನೋಯ್ಡಾ ಸೆಕ್ಟರ್ 20 ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ” ಎಂದು ನೋಯ್ಡಾ ಪೊಲೀಸರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News