×
Ad

Haryana | ನಿರ್ಮಾಣ ಹಂತದ ಕಟ್ಟಡದ ಗೋಡೆ ಕುಸಿದು ಬಿದ್ದು 7 ಮಂದಿ ಕಾರ್ಮಿಕರು ಮೃತ್ಯು

Update: 2026-03-10 11:21 IST

Photo | NDTV

ಗುರುಗ್ರಾಮ: ಹರ್ಯಾಣದ ಗುರುಗ್ರಾಮದ ಸಿಧ್ರಾವಲಿ ಪ್ರದೇಶದಲ್ಲಿ ನಿರ್ಮಾಣ ಹಂತದ ಕಟ್ಟಡದ ಗೋಡೆ ಕುಸಿದು ಬಿದ್ದು 7 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ.

ಗೋಡೆ ಕುಸಿದು ಸುಮಾರು 12 ರಿಂದ 15 ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದರು. ಮಾಹಿತಿ ತಿಳಿದ ಕೂಡಲೇ ಸ್ಥಳೀಯ ಪೊಲೀಸರು ಮತ್ತು ಎಸ್‌ಡಿಆರ್‌ಎಫ್ ತಂಡಗಳು ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಿದೆ.

"ಕಾರ್ಮಿಕರನ್ನು ಅವಶೇಷಗಳಡಿಯಿಂದ ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ. ನಾಲ್ವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ" ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಮಿಕರ ಮೃತದೇಹವನ್ನು ಸರಕಾರಿ ಜಿಲ್ಲಾಸ್ಪತ್ರೆಯಲ್ಲಿ ಇರಿಸಲಾಗಿದ್ದು, ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News