×
Ad

"ನಾನು ರಾಜೀನಾಮೆ ನೀಡಿಲ್ಲ": ವದಂತಿಗಳನ್ನು ಅಲ್ಲಗಳೆದ ಹಿಮಾಚಲ ಪ್ರದೇಶ ಮುಖ್ಯಮಂತ್ರಿ

Update: 2024-02-28 13:54 IST

ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು (PTI)

ಶಿಮ್ಲಾ: ಕಾಂಗ್ರೆಸ್ ಪಕ್ಷದಲ್ಲಿ ಬಿಕ್ಕಟ್ಟು ಉಲ್ಬಣಗೊಂಡಿರುವ ಬೆನ್ನಿಗೇ ನಾನು ರಾಜೀನಾಮೆ ನೀಡಿಲ್ಲ ಎಂದು ಹೇಳಿರುವ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು, ಈ ಕುರಿತು ಹರಡಿರುವ ವದಂತಿಗಳನ್ನು ಅಲ್ಲಗಳೆದಿದ್ದಾರೆ.

ಹಿಮಾಚಲ ಪ್ರದೇಶ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಕೆಲವು ಶಾಸಕರು ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ರಾಜಿನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ. ಬಳಿಕ ಕೆಲವು ಮಾಧ್ಯಮಗಳು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ವರದಿ ಮಾಡಿತ್ತು. ಬಳಿಕ ಸ್ಪಷ್ಟನೆ ನೀಡಿದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು, ರಾಜೀನಾಮೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಶಾಸಕರನ್ನು ನಿರ್ಲಕ್ಷಿಸುತ್ತಿದ್ದಾರೆ ಹಾಗೂ ಗಿರಿ ರಾಜ್ಯದ ಉನ್ನತ ನಾಯಕರಾದ ತನ್ನ ತಂದೆ ದಿ. ವೀರಭದ್ರ ಸಿಂಗ್ ಅವರಿಗೆ ಅಗೌರವ ತೋರುತ್ತಿದ್ದಾರೆ ಎಂದು ಆರೋಪಿಸಿ ಸಚಿವ ವಿಕ್ರಮಾದಿತ್ಯ ಸಿಂಗ್ ತಮ್ಮ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News