×
Ad

ವಕ್ಫ್ ತಿದ್ದುಪಡಿ ಮಸೂದೆಗೆ ರಾಜ್ಯಸಭೆಯಲ್ಲಿ ಬೆಂಬಲ ವ್ಯಕ್ತಪಡಿಸಿದ ಎಚ್.ಡಿ. ದೇವೇಗೌಡ

Update: 2025-04-03 19:58 IST

ಎಚ್.ಡಿ. ದೇವೇಗೌಡ

ಹೊಸದಿಲ್ಲಿ: ವಕ್ಫ್ ತಿದ್ದುಪಡಿ ಮಸೂದೆಗೆ ರಾಜ್ಯಸಭೆಯಲ್ಲಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಬೆಂಬಲ ವ್ಯಕ್ತಪಡಿಸಿದರು.

ಮಸೂದೆ ಕುರಿತ ಚರ್ಚೆಯ ವೇಳೆ ರಾಜ್ಯಸಭೆಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡ, ಸದನದ ನಾಯಕ ನಡ್ಡಾ ಅವರ ಭಾಷಣವನ್ನು ಕೇಳಿದ ನಂತರ ನನಗೆ ಏನೂ ಹೇಳಲು ಉಳಿದಿಲ್ಲ ಎಂದು ನಾನು ಭಾವಿಸುತ್ತೇನೆ. ಅವರು ಈ ವಕ್ಫ್ ಮಸೂದೆಯ ಬಗ್ಗೆ ಸಮಗ್ರ ಭಾಷಣ ಮಾಡಿದರು. ವಿಶೇಷವಾಗಿ ಮಸೂದೆಯ ಬಗ್ಗೆ ಮಾತನಾಡಿದರು. ಈ ಸದನ ಕೂಡ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಬೇಕು ಎಂದು ಆಗ್ರಹಿಸಿದರು.

ಲೋಕಸಭೆಯಲ್ಲಿ ಅಂಗೀಕಾರವಾದ ವಕ್ಫ್‌ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸಚಿವ ಕಿರಣ್ ರಿಜಿಜು ಗುರುವಾರ ರಾಜ್ಯಸಭೆಯಲ್ಲಿ ಮಂಡಿಸಿದರು. ಸದನದಲ್ಲಿ ಮಸೂದೆ ಬಗ್ಗೆ ಚರ್ಚೆ ನಡೆಯುತ್ತಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News