ಕೇರಳದಲ್ಲಿ ಭಾರೀ ಮಳೆ; ಯೆಲ್ಲೊ ಅಲರ್ಟ್ ಘೋಷಣೆ
Update: 2023-09-29 21:55 IST
Photo: NDTV
ತಿರುವನಂತಪುರ: ಶುಕ್ರವಾರ ಸುರಿದ ಭಾರೀ ಮಳೆಯಿಂದ ಕೇರಳದ ಹಲವು ಭಾಗಗಲ್ಲಿ ನೆರೆ ಸಂಭವಿಸಿದೆ. ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದೆ.
ಗುರುವಾರ ರಾತ್ರೀ ಧಾರಾಕಾರ ಮಳೆ ಸುರಿದ ಹಿನ್ನೆಲೆಯಲ್ಲಿ ಪತ್ತನಂತಿಟ್ಟ, ಇಡುಕ್ಕಿ, ಎರ್ನಾಕುಳಂ, ತ್ರಿಶೂರು, ಮಲಪ್ಪುರಂ, ಕೋಝಿಕ್ಕೋಡ್, ಆಲಪ್ಪುಝ, ಕೊಟ್ಟಾಯಂ, ಕಣ್ಣೂರು ಹಾಗೂ ಕಾಸರಗೋಡು ಸೇರಿದಂತೆ ರಾಜ್ಯದ 10 ಜಿಲ್ಲೆಗಳಲ್ಲಿ ಭಾರತದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ರಾಜ್ಯದ ಹಲವು ಸ್ಥಳಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಿಡಿಲಿನಿಂದ ಕೂಡಿದ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆಯ ಮೂಲಗಳು ತಿಳಿಸಿವೆ. ಈ ನಡುವೆ ಗೋವಾ ಸೇರಿದಂತೆ ದೇಶದ ಇತರ ಭಾಗಗಳಲ್ಲಿ ಕಳೆದ 24 ಗಂಟೆಗಳಲ್ಲಿ ಉತ್ತಮ ಮಳೆ ಬಿದ್ದಿದೆ.