×
Ad

ಉತ್ತರಾಖಂಡದಲ್ಲಿ ಹೆಲಿಕಾಪ್ಟರ್ ಪತನ : 6 ಮಂದಿ ಮೃತ್ಯು

Update: 2025-05-08 11:07 IST

Photo | hindustantimes

ಡೆಹ್ರಾಡೂನ್ : ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಗಂಗಾನಣಿ ಬಳಿ ಗುರುವಾರ ಹೆಲಿಕಾಪ್ಟರ್ ಪತನಗೊಂಡು ಪೈಲಟ್ ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಗಂಗಾನಣಿ ಬಳಿ ಈ ಘಟನೆ ನಡೆದಿದೆ. ಹೆಲಿಕಾಪ್ಟರ್ ಪತನದ ವೇಳೆ ಪೈಲಟ್ ಸೇರಿದಂತೆ ಆರು ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ. ಸ್ಥಳದಲ್ಲಿ  ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ವಿಮಾನ ಪತನಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.

ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ, ಪರಿಹಾರ ಮತ್ತು ರಕ್ಷಣಾ ಕಾರ್ಯಕ್ಕಾಗಿ ರಾಜ್ಯ ವಿಪತ್ತು ನಿರ್ವಹಣಾ ಪಡೆ ಮತ್ತು ಜಿಲ್ಲಾಡಳಿತ ತಂಡಗಳು ಸ್ಥಳಕ್ಕೆ ತೆರಳಿವೆ. ಗಾಯಗೊಂಡವರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲು ಮತ್ತು ಅಪಘಾತದ ಬಗ್ಗೆ ತನಿಖೆ ನಡೆಸಲು ಸೂಚಿಸಿರುವುದಾಗಿ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News