×
Ad

ಜಾರ್ಖಂಡ್ ಮುಖ್ಯಮಂತ್ರಿಯಾಗಿ ಇಂದು ಹೇಮಂತ್ ಸೊರೆನ್ ಪ್ರಮಾಣವಚನ

Update: 2024-11-28 10:20 IST

Photo | PTI

ರಾಂಚಿ: ಜಾರ್ಖಂಡ್ ನ 14ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಗುರುವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ರಾಂಚಿಯ ಮೊರಾಬಾಡಿ ಮೈದಾನದಲ್ಲಿ ಗುರುವಾರ ಸಂಜೆ 4 ಗಂಟೆಗೆ ನಡೆಯುವ ಅದ್ಧೂರಿ ಸಮಾರಂಭದಲ್ಲಿ ಹೇಮಂತ್ ಸೊರೆನ್ ಅವರಿಗೆ ರಾಜ್ಯಪಾಲ ಸಂತೋಷ್ ಕುಮಾರ್ ಗಂಗ್ವಾರ್ ಪ್ರಮಾಣ ವಚನ ಬೋಧಿಸಲಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಜಾರ್ಖಂಡ್ ಉಸ್ತುವಾರಿ ಗುಲಾಮ್ ಅಹ್ಮದ್ ಮಿರ್ ಈ ಕುರಿತು ಮಾಹಿತಿ ನೀಡಿದ್ದು, ಗುರುವಾರ ಹೇಮಂತ್ ಸೊರೆನ್ ಒಬ್ಬರೇ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಮತ್ತು ವಿಧಾನಸಭೆಯಲ್ಲಿ ವಿಶ್ವಾಸ ಮತದ ನಂತರ ತಮ್ಮ ಸಂಪುಟವನ್ನು ವಿಸ್ತರಿಸಲಿದ್ದಾರೆ ಎಂದು ಹೇಳಿದ್ದಾರೆ.

ಹೇಮಂತ್ ಸೊರೆನ್ ಪ್ರಮಾಣವಚನ ಸಮಾರಂಭದಲ್ಲಿ INDIA ಮೈತ್ರಿ ಕೂಟದ ನಾಯಕರಾದ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎನ್‌ ಸಿಪಿ(ಎಸ್ಪಿ) ಮುಖ್ಯಸ್ಥ ಶರದ್ ಪವಾರ್, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು, ಸಿಪಿಐ(ಎಂಎಲ್) ಪ್ರಧಾನ ಕಾರ್ಯದರ್ಶಿ ದೀಪಂಕರ್ ಭಟ್ಟಾಚಾರ್ಯ, ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್, ಶಿವಸೇನಾ(ಯುಬಿಟಿ) ನಾಯಕ ಉದ್ಧವ್ ಠಾಕ್ರೆ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ, ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್, ಕರ್ನಾಟಕದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾಗವಹಿಸಲಿದ್ದಾರೆ ಎಂದು ಹೇಳಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News