×
Ad

ಟೊಮೆಟೋ ಅಂಗಡಿಗೆ ಬೌನ್ಸರ್‌ ಗಳ ನೇಮಕ: ವ್ಯಾಪಾರಿಯನ್ನು ಬಂಧಿಸಿದ ಪೊಲೀಸರು

ಸಮಾಜವಾದಿ ಪಕ್ಷದ ಕಾರ್ಯಕರ್ತ ಅಜಯ್ ಫೌಜಿ ಎಂಬವರು ರವಿವಾರ ವಾರಣಾಸಿಯ ಲಂಕಾ ಪ್ರದೇಶದಲ್ಲಿ ತರಕಾರಿ ಮಾರಾಟಗಾರರ ಅಂಗಡಿಯೊಂದರಲ್ಲಿ ಎರಡು ಬೌನ್ಸರ್‌ಗಳನ್ನು ನಿಯೋಜಿಸಿದ್ದರು

Update: 2023-07-12 14:26 IST

Photo: PTI

ಲಕ್ನೋ: ಟೊಮೆಟೋ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಪ್ರತಿಭಟನೆಯ ರೂಪದಲ್ಲಿ ಟೊಮೆಟೊಗಳನ್ನು ಕಾಯಲು ಬೌನ್ಸರ್‌ (ಕಾವಲುಗಾರರು) ಗಳನ್ನು ನಿಲ್ಲಿಸಿ ದೇಶದಾದ್ಯಂತ ಸುದ್ದಿಯಾಗಿದ್ದ ವ್ಯಾಪಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಈ ಯೋಜನೆಯನ್ನು ಹಾಕಿದ್ದ ಸಮಾಜವಾದಿ ಪಕ್ಷದ ನಾಯಕ ಮಾತ್ರ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಸಮಾಜವಾದಿ ಪಕ್ಷದ ಕಾರ್ಯಕರ್ತ ಅಜಯ್ ಫೌಜಿ ಎಂಬವರು ರವಿವಾರ ವಾರಣಾಸಿಯ ಲಂಕಾ ಪ್ರದೇಶದಲ್ಲಿ ತರಕಾರಿ ಮಾರಾಟಗಾರರ ಅಂಗಡಿಯೊಂದರಲ್ಲಿ ಎರಡು ಬೌನ್ಸರ್‌ಗಳನ್ನು ನಿಯೋಜಿಸಿದ್ದರು. ಇದು ಟೊಮೆಟೊ ಬೆಲೆಯ ಬಗ್ಗೆ ಚೌಕಾಶಿ ಮಾಡುವಾಗ ಖರೀದಿದಾರರು ಆಕ್ರಮಣಕಾರಿ ವರ್ತನೆ ತೋರುವುದನ್ನು ತಡೆಯಲು ಕೈಗೊಂಡ ಕ್ರಮ ಎಂದು ಅವರು ಹೇಳಿದ್ದರು.

ಅಂಗಡಿ ಮಾಲೀಕ ರಾಜ್ ನಾರಾಯಣ್ ನನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ವಶಕ್ಕೆ ಪಡೆಯಲಾಗಿದ್ದು, ನಾಟಕೀಯ ಪ್ರತಿಭಟನೆ ನಡೆಸಿದ ಅಜಯ್ ಫೌಜಿ ಹಾಗೂ ಇಬ್ಬರು ಬೌನ್ಸರ್ ಗಳು ಪರಾರಿಯಾಗಿದ್ದಾರೆ. ಪೊಲೀಸರು ನೀಡಿದ ದೂರಿನ ಆಧಾರದ ಮೇಲೆ ಸಿರಗೋವರ್ಧನಪುರ ನಿವಾಸಿ ಫೌಜಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News