×
Ad

ಹುಸಿ ಬಾಂಬ್ ಬೆದರಿಕೆ: ಕೇರಳ ಮುಖ್ಯಮಂತ್ರಿ ನಿವಾಸ, ನ್ಯಾಯಾಲಯ ಸಂಕೀರ್ಣದಲ್ಲಿ ಶೋಧ ಕಾರ್ಯಾಚರಣೆ

Update: 2025-09-08 17:47 IST

ಪಿಣರಾಯಿ ವಿಜಯನ್ | PTI

ತಿರುವನಂತಪುರಂ: ಕೇರಳ ಮುಖ್ಯಮಂತ್ರಿ ನಿವಾಸ ಹಾಗೂ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಬಾಂಬ್ ಇರಿಸಲಾಗಿದೆ ಎಂದು ಇಮೇಲ್ ಸ್ವೀಕರಿಸಿದ ಹಿನ್ನೆಲೆಯಲ್ಲಿ, ಪೊಲೀಸರು ಈ ಜಾಗಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದರು.

ಇಂದು ಬೆಳಗ್ಗೆ ಜಿಲ್ಲಾ ನ್ಯಾಯಾಲಯದ ಅಧಿಕೃತ ಇಮೇಲ್ ವಿಳಾಸಕ್ಕೆ ಈ ಬಾಂಬ್ ಬೆದರಿಕೆ ಬಂದಿದ್ದರಿಂದ, ತ್ವರಿತ ಕಾರ್ಯಾಚರಣೆ ನಡೆಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಇದರ ಬೆನ್ನಿಗೇ ನ್ಯಾಯಾಲಯ ಸಂಕೀರ್ಣ ಹಾಗೂ ಕ್ಲಿಫ್ ಹೌಸ್ ಗೆ ಧಾವಿಸಿದ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ ಹಾಗೂ ಶ್ವಾನ ದಳದ ತಂಡಗಳು ಎರಡೂ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದವು.

ಆದರೆ, ಸ್ಥಳದಲ್ಲಿ ಯಾವುದೇ ಬಾಂಬ್ ಪತ್ತೆಯಾಗಲಿಲ್ಲ. ಹೀಗಾಗಿ, ಇದು ಹುಸಿ ಬಾಂಬ್ ಬೆದರಿಕೆ ಕರೆ ಎಂಬುದು ದೃಢಪಟ್ಟಿದೆ.

ಈ ಸಂಬಂಧ ಇಮೇಲ್ ರವಾನಿಸಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಇಮೇಲ್ ನಲ್ಲಿ ತಮಿಳುನಾಡು ರಾಜಕಾರಣದ ಉಲ್ಲೇಖಗಳಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವರ್ಷದಲ್ಲಿ ಇಲ್ಲಿಯವರೆಗೆ ಇಂತಹ 28 ಹುಸಿ ಬಾಂಬ್ ಬೆದರಿಕೆಗಳನ್ನು ಸ್ವೀಕರಿಸಲಾಗಿದ್ದು, ಈ ಬೆದರಿಕೆಗಳು ಕ್ಲಿಫ್ ಹೌಸ್, ರಾಜಭವನ, ವಿಮಾನ ನಿಲ್ದಾಣ ಹಾಗೂ ನ್ಯಾಯಾಲಯಗಳನ್ನು ಗುರಿಯಾಗಿಸಿಕೊಂಡಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News