×
Ad

ದಿಲ್ಲಿಯ ಅತಿ ದೊಡ್ಡ ತರಕಾರಿ ಮಾರುಕಟ್ಟೆಯಲ್ಲಿ ಭಾರೀ ಅಗ್ನಿ ಅವಘಡ

Update: 2023-09-29 20:14 IST

Screengrab: X/@PTI_News

ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯ ಅತಿದೊಡ್ಡ ತರಕಾರಿ ಮಾರಾಟಗಾರರ ಮಾರುಕಟ್ಟೆಯಲ್ಲಿ ಇಂದು ಸಂಜೆ ಭಾರಿ ಬೆಂಕಿ ಕಾಣಿಸಿಕೊಂಡಿದೆ. ದೆಹಲಿಯ ಅತಿದೊಡ್ಡ ತರಕಾರಿ ಮಾರುಕಟ್ಟೆಯಾದ ಆಝಾದ್‌ಪುರ ಮಂಡಿ ಹೊತ್ತಿ ಉರಿಯುತ್ತಿರುವ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ.

11 ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿದ್ದು ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಕಿಯನ್ನು ಹತೋಟಿಗೆ ತರಲಾಗಿದ್ದು, ಟೊಮೆಟೊ ಮಾರಾಟಗಾರರ ಅಂಗಡಿಯ ಹಿಂಬದಿಯ ಕಸದ ರಾಶಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಶಂಕಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News