"ನಾನು ಈ ಬಗ್ಗೆ ಪರಿಶೀಲಿಸುತ್ತೇನೆ": ಬೀದಿ ನಾಯಿಗಳ ಕುರಿತ ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ಸಿಜೆಐ ಪ್ರತಿಕ್ರಿಯೆ
ದಿಲ್ಲಿ ನಗರವನ್ನು ಬೀದಿ ನಾಯಿಗಳಿಂದ ಮುಕ್ತಗೊಳಿಸುವಂತೆ ಆದೇಶಿಸಿದ್ದ ಸುಪ್ರೀಂ ಕೋರ್ಟ್
ಸಿಜೆಐ ಬಿ.ಆರ್. ಗವಾಯಿ (File Photo: PTI)
ಹೊಸದಿಲ್ಲಿ: ವ್ಯಾಪಕ ವಿರೋಧಗಳ ಹಿನ್ನೆಲೆ ದಿಲ್ಲಿ ನಗರವನ್ನು ಬೀದಿನಾಯಿಗಳಿಂದ ಮುಕ್ತಗೊಳಿಸುವಂತೆ ಸೂಚಿಸಿದ ಆದೇಶವನ್ನು ಮರುಪರಿಶೀಲಿಸುವುದಾಗಿ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಹೇಳಿದ್ದಾರೆ.
ನಾಯಿ ಕಡಿತ ಮತ್ತು ರೇಬೀಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ವಸತಿ ಪ್ರದೇಶಗಳಿಂದ ಎಲ್ಲಾ ಬೀದಿ ನಾಯಿಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ಸುಪ್ರೀಂ ಕೋರ್ಟ್ ಸೋಮವಾರ ಆದೇಶಿಸಿತ್ತು, ಇದಕ್ಕೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.
ಈ ವಿಷಯವನ್ನು ಬುಧವಾರ ಬೆಳಿಗ್ಗೆ ಮುಖ್ಯ ನ್ಯಾಯಮೂರ್ತಿಗಳ ಮುಂದೆ ಪ್ರಸ್ತಾಪಿಸಲಾಗಿದೆ. ಬೀದಿ ನಾಯಿಗಳ ಸ್ಥಳಾಂತರ ಮತ್ತು ಹತ್ಯೆ ನಿಷೇಧಿಸುವ ಮತ್ತು ಬೀದಿ ನಾಯಿಗಳಿಗೆ ಸಂಬಂಧಿಸಿದ ಕಾನೂನುಗಳು ಮತ್ತು ನಿಯಮಗಳನ್ನು ಪಾಲಿಸುವಂತೆ ಆದೇಶಿಸುವ ಹಿಂದಿನ ನ್ಯಾಯಾಲಯದ ಆದೇಶದ ಬಗ್ಗೆಯೂ ನ್ಯಾಯಮೂರ್ತಿಗಳ ಗಮನಕ್ಕೆ ತರಲಾಗಿದೆ.
ಈ ವೇಳೆ "ನಾನು ಈ ಬಗ್ಗೆ ಪರಿಶೀಲಿಸುತ್ತೇನೆ" ಎಂದು ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಹೇಳಿದ್ದಾರೆ.